ಕಲಬುರ್ಗಿ : ಪ್ರಾರ್ಥನಾ ಮಂದಿರ, ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿ ವರ್ಧಕ ಅಳವಡಿಕೆ ಕುರಿತು ಕೋರ್ಟ್ ನೀಡಿರುವ ಆದೇಶ ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿವರ್ಧಕಗಳಿಗೆ ಎಷ್ಟುಪ್ರಮಾಣದ ಡೆಸಿಬಲ್ ಅಳವಡಿಸಬೇಕೆಂದು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸ್ಪಷ್ಟವಾದ ಆದೇಶ ನೀಡಿದೆ. ಇದನ್ನ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತುಕತೆ ನಡೆಸಿ ಧ್ವನಿವರ್ಧಕ ಅಳವಡಿಸುವ ಸಂಬಂಧ ಸುತ್ತೋಲೆ ಹೊರಡಿಸಲು ಸೂಚನೆ ನೀಡಲಾಗಿತ್ತು. ಅದರಂತೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸುತ್ತೋಲೆ ಹೊರಡಿಸಿ ಆಯಾ ಧರ್ಮಗಳ ಧಾರ್ಮಿಕ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಸೌಹಾರ್ದಯುತವಾದ ವಾತಾವರಣವನ್ನು ಮೂಡಿಸಿಕೊಂಡು ಹೋಗುವಂತೆ ಸೂಚಿಸಿರುವುದಾಗಿ ತಿಳಿಸಿದರು.
Previous Articleಎತ್ತಿನಹೊಳೆ ಯೋಜನೆಯಲ್ಲಿ ಕಾಂಗ್ರೆಸ್ ಹಾಗು ಬಿಜೆಪಿ ಹಣ ಲೂಟಿ
Next Article ಮುನಿಶ್ ಮೌದ್ಗಿಲ್ ಸ್ವಾವಲಂಬಿ