ಬೆಳಗಾವಿ,ಜೂ.12-
ವಿಚಾರಣೆಗೆ ಕರೆತಂದ ಖೈದಿಯೊಬ್ಬ ಜಿಲ್ಲಾ ನ್ಯಾಯಾಲಯದ ಒಳಗಡೆಯೇ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನ್ಯಾಯಾಲಯದಲ್ಲಿ ಪಾಕ್ ಪರ ಘೋಷಣೆ ಮೊಳಗಿಸಿದ ಖತರ್ನಾಕ್ ಖದೀಮನಿಗೆ ಸ್ಥಳದಲ್ಲಿದ್ದವರು ಧರ್ಮದೇಟು ನೀಡಿದ್ದಾರೆ. ತಕ್ಷಣವೇ ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗಟ್ಟಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕೋರ್ಟ್ಗೆ ಹಾಜರುಪಡಿಸಿದ್ದಾಗ ಕುಖ್ಯಾತ ಆರೋಪಿ ಜಯೇಶ್ ಪೂಜಾರಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ.
ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಕೋರ್ಟ್ ಒಳ ಭಾಗದಲ್ಲೇ ಹಿಗ್ಗಾಮುಗ್ಗ ಥಳಿಸಿದ್ದರು,ಕೂಡಲೇ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು. ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಜಯೇಶ್ ಪೂಜಾರ್ ಎಡಿಜಿಪಿ ಅಲೋಕ್ ಕುಮಾರ್ ಗೆ ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಪಾಕ್ ಪರ ಘೋಷಣೆ ಕೂಗಿರುವುದಾಗಿ ಆತ ಹೇಳಲಾಗಿದೆ.
Previous Articleಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
Next Article ಸಿಲಿಕಾನ್ ಸಿಟಿ ಅಲ್ಲ,Accident ಸಿಟಿ.