ಜಗತ್ತಿನಾದ್ಯಂತ ಜನ ಜೀವನವನ್ನು ತತ್ತರಗೊಳ್ಳುವಂತೆ ಮಾಡಿದ ಸಾಂಕ್ರಾಮಿಕ ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ನಾಲ್ಕನೆ ಅಲೆ ರೂಪದಲ್ಲಿ ಮತ್ತೆ ಬರುತ್ತಿದೆ ಹೀಗಾಗಿ ಎಲ್ಲರೂ ವ್ಯಾಪಕ ಮುಂಜಾಗ್ರತೆ ವಹಿಸಬೇಕಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನರು ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ.ಮಾಸ್ಕ್ ಧರಿಸುತ್ತಿಲ್ಲ ಮುಂಜಾಗ್ರತೆ ದೃಷ್ಟಿಯಿಂದ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಅನೇಕ ಜನರು ಲಸಿಕೆ ಕೂಡಾ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು ಎಂದು ಹೇಳಿದರು.
ಸದ್ಯದಲ್ಲೇ 5 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಬರಲಿದೆ. ಕೊರೊನಾ ತಡೆಗಟ್ಟಲು ಯಾವ ಕ್ರಮಕೈಗೊಳ್ಳಬೇಕು ಮತ್ತು ನಿಯಮಗಳ ಬಗ್ಗೆ ತಜ್ಞರ ಸಲಹೆ ಪಡೆಯುತ್ತೇವೆಪಾಸಿಟಿವಿಟಿ ದರದ ಆಧಾರದಲ್ಲಿ ಟೆಸ್ಟಿಂಗ್ ಜಾಸ್ತಿ ಮಾಡುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ನಾವು ಟೆಸ್ಟಿಂಗ್ ಮಾಡುತ್ತಿದ್ದೇವೆ. ಅನಗತ್ಯವಾಗಿ ಟೆಸ್ಟ್ ಮಾಡಬೇಕಾಗಿಲ್ಲ ಎಂದಿದ್ದಾರೆ.
ನಮ್ಮಲ್ಲಿ ಓಮಿಕ್ರಾನ್ ಸಬ್ ವೇರಿಯಂಟ್ ಕಂಡು ಬಂದಿಲ್ಲ. ಈಗಾಗಲೇ ಲ್ಯಾಬ್‍ನಿಂದ ಕೇಂದ್ರಕ್ಕೆ ಮಾಹಿತಿ ರವಾನೆ ಆಗಿದೆ. ಕೇಂದ್ರದಿಂದ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಹೇಳಿದ್ದಾರೆ.
Previous Articleಹುಬ್ಬಳ್ಳಿ ಗಲಭೆ–ಡಿಜಿಟಲ್ ಸಾಕ್ಷ್ಯ..
Next Article ಸುಳ್ಳು ಹೇಳಿದ್ರಾ ಐಪಿಎಸ್ ಕೆಂಪಯ್ಯ..