ಬೆಂಗಳೂರು,ಫೆ.27-
ಇಶಾ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಶಿವರಾತ್ರಿ ಸಮಾರಂಭದಲ್ಲಿ ಕೇಂದ್ರ ಮಂತ್ರಿ ಅಮಿತ್ ಷಾ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ವಿಚಾರ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿರುವ ಬೆನ್ನಲ್ಲೇ ಇದು ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುನ್ಸೂಚನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ್ಣಿಸಿದ್ದಾರೆ.
83ನೇ ವಸಂತಕ್ಕೆ ಕಾಲಿಟ್ಟ ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹುಟ್ಟು ಹಬ್ಬ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ಹಿಂದೆಯೇ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದೆ ಅದು ಈಗ ಸತ್ಯವಾಗುವ ಕಾಲ ಹತ್ತಿರ ಬರುತ್ತಿದೆ ಎಂದರು.
ರಾಜ್ಯ ಕಾಂಗ್ರೆಸ್ ನಲ್ಲಿ ಒಳ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಧಿಕಾರಕ್ಕಾಗಿ ನಾಯಕರಲ್ಲಿ ಕಚ್ಚಾಟ ಆರಂಭವಾಗಿದ್ದು ಯಾವುದೇ ಕ್ಷಣದಲ್ಲಿ ಅದು ಸ್ಪೋಟವಾಗಲಿದೆ ಎಂದು ಹೇಳಿದರು
ಪ್ರತಿಕ್ಷಗಳ ಕ್ಷೇತ್ರದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಬಾರದು ಹಾಗೂ ಗ್ರೇಟರ್ Bengaluru ಪ್ರಸ್ತಾಪ ಕೈ ಬಿಟ್ಟು ತಕ್ಷಣವೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ಒತ್ತಾಯಿಸಲು ಬಿಜೆಪಿ ಶಾಸಕರ ನಿಯೋಗದಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವುದಾಗಿ ತಿಳಿಸಿದರು.
Previous Articleಎತ್ತುಗಳ ಕಳ್ಳರು ಸಿಕ್ಕಿಬಿದ್ದರು
Next Article ಮೋಹನ್ ದಾಸ್ ಪೈ ಗೆ ಎಂ.ಬಿ.ಪಾಟೀಲ್ ಸಲಹೆ