ಮಂಗಳೂರು. ಅ,3-
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ Electionಗೆ ಕಾಂಗ್ರೆಸ್ ಭರ್ಜರಿ ರಣಕಹಳೆ ಮೊಳಗಿಸಿದೆ.
ಒಗ್ಗಟ್ಟಿನ ಸಂದೇಶ ಸಾರುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ಉತ್ಸಾಹದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವರಾದ ರಮಾನಾಥ ರೈ ಜಯಪ್ರಕಾಶ್ ಹೆಗಡೆ ಪಕ್ಷದ ಕಾರ್ಯ ಅಧ್ಯಕ್ಷ ಮಂಜುನಾಥ ಭಂಡಾರಿ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರೊಂದಿಗೆ ತೆರಳಿ ಚುನಾವಣಾ ಅಧಿಕಾರಿಯಾಗಿರುವ ಮಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆ ನಡೆಯುತ್ತಿದೆ.
ಈ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಮಾಜಿ ಸಚಿವರಾದ ರಮಾನಾಥ ರೈ ಜಯಪ್ರಕಾಶ್ ಹೆಗಡೆ ಸೇರಿದಂತೆ ಹಲವಾರು ಘಟಾನುಘಟಿ ನಾಯಕರು ಪೈಪೋಟಿ ನಡೆಸಿದ್ದರು. ಆದರೆ ಹೈಕಮಾಂಡ್ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಹೊಸ ಸಂದೇಶ ರವಾನಿಸಿದೆ.
ಕೆಪಿಸಿಸಿ ಶಿಫಾರಸು ಆಧರಿಸಿ ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ಎಲ್ಲ ನಾಯಕರು ಗೌರವಿಸಿದ್ದು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವ ಭರವಸೆ ನೀಡಿದ್ದಾರೆ
Previous Articleಹಣಕ್ಕಾಗಿ ಬೆದರಿಕೆ ಹಾಕಿದ್ರಾ ಕುಮಾರಸ್ವಾಮಿ.?
Next Article ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.