ಬೀದರ್ – ಸರ್ಕಾರದ ಕೆಲಸ ನಿರ್ವಹಣೆ ವೇಳೆ ಅಕ್ರಮವೆಸಗಿ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಲ್ಲಿ ಸೇವೆಯಿಂದ ಅಮಾನತುಗೊಂಡ ಅಧಿಕಾರಿ ತನ್ನನ್ನು ಸೇವೆಯಿಂದ ಅಮಾನತುಗೊಳಿಸಿದ ಉನ್ನತ ಅಧಿಕಾರಿಯ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ.
ಅಕ್ರಮ ಆರೋಪದ ಅಡಿಯಲ್ಲಿ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಸುಂದಾಳ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಪ್ರಭುದಾಸ ಜಾಧವ ಅವರನ್ನು ಕಳೆದ ಜನವರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆಲಸದಿಂದ ಅಮಾನತುಗೊಳಿಸಿದ್ದರು.
ಅಮಾನತು ಗೊಂಡಿದ್ದ ಪಿಡಿಒ ಜಾದವ್ ತಮ್ಮನ್ನು.
ಕೆಲಸಕ್ಕೆ ಮರು ನಿಯೋಜನೆಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಉಪಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ ಅವರ ಕಚೇರಿಗೆ ಮನವಿ ಪತ್ರ ಹಿಡಿದು ಹೋಗಿದ್ದಾರೆ . ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಪ್ರಭುದಾಸ ಜಾಧವ ಕೋಪೋದ್ರಿಕ್ತನಾಗಿ ಸೂರ್ಯಕಾಂತ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಆನಂತರ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ್ ದಿಲೀಪ್ ಬದೋಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಗಲಾಟೆ ಕುರಿತಂತೆ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ತೆಗೆದು ಪರಿಶೀಲನೆ ನಡೆಸಿದರು.