ಬೆಂಗಳೂರು,ಫೆ.27-
ಚಲಿಸುತ್ತಿದ್ದ ಬೈಕ್ ಮೇಲೆ ಸಿನಿಮೀಯ ಶೈಲಿಯಲ್ಲಿ ಪ್ರೇಮಿಗಳು ರೋಮ್ಯಾನ್ಸ್ ಮಾಡುತ್ತಾ ಹುಚ್ಚಾಟ ಮೆರೆದ ಘಟನೆ ರಾಜಧಾನಿ ಮಹಾನಗರ ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ.
ಬುಲೆಟ್ ಬೈಕ್‍ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಉಲ್ಟಾ ಕೂರಿಸಿಕೊಂಡು ಹಾಡಹಗಲೇ ಸರಸ ಮಾಡುತ್ತಾ ನಡುರಸ್ತೆಯಲ್ಲಿ ಯುವಕ ಬೈಕ್ ಚಲಾಯಿಸಿದ್ದಾನೆ.
ತಮಿಳುನಾಡಿನ ನಂಬರ್ ಪ್ಲೇಟ್ ಹೊಂದಿರುವ ಬೈಕ್ ಇದಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ಪ್ರೋಟೋ ಫೊಲಿಯೋ ಎಂಬ ಪೇಜ್‍ನಿಂದ ವಿಡಿಯೋ ಪೋಸ್ಟ್ ಮಾಡಲಾಗಿದ್ದು,ನಗರ ಪೊಲೀಸರನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಲಾಗಿದೆ. ವಿಡಿಯೋ ಅಧರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.