Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಸಲಿ ಕಾರಣ ಇಲ್ಲಿದೆ.
    ಮಾಹಿತಿ

    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಸಲಿ ಕಾರಣ ಇಲ್ಲಿದೆ.

    vartha chakraBy vartha chakraJune 6, 2025No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5:
    ಐಪಿಎಲ್ ಕಪ್ ಗೆದ್ದ ಆರ್ ಸಿ ಬಿ ಕ್ರಿಕೆಟ್ ತಂಡದ ವಿಜಯೋತ್ಸವ ಆಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಹನ್ನೊಂದು ಮಂದಿಯನ್ನು ಬಲಿ ಪಡೆದಿದೆ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಇಂತಹ ದುರ್ಘಟನೆ ನಡೆಯಲು ಪ್ರಚಾರದ ಹಪಾಹಪಿತನ, ಹೊಂದಾಣಿಕೆಯ ಕೊರತೆ ಮತ್ತು ಜನಸಾಮಾನ್ಯರ ಅಂದಾಭಿಮಾನ ಪ್ರಮುಖ ಕಾರಣ ಎಂಬ ಅಂಶ ಬೆಳಕಿಗೆ ಬಂದಿದೆ.
    ಸಿನಿಮಾ ತಾರೆಯರು ಕ್ರಿಕೆಟ್ ಕಲಿಗಳು ಎಂದರೆ ಅಭಿಮಾನಿಗಳ ಪಾಲಿಗೆ ಸ್ವರ್ಗದಿಂದ ಇಳಿದು ಬಂದವರು ದೇವ ಸಮಾನರು ಎಂಬ ನಂಬಿಕೆ ಇದೆ ಇವರನ್ನು ಹತ್ತಿರದಿಂದ ನೋಡಲು ಹಸ್ತಲಾಘವ
    ಮಾಡಲು ಮುಗಿ ಬೀಳುತ್ತಾರೆ.
    ತಮ್ಮ ನೆಚ್ಚಿನ ತಾರೆಯರನ್ನು ನೋಡಿ ಕಣ್ತುಂಬಿಕೊಳ್ಳಲು ಎಷ್ಟು ದೂರವಾದರೂ ಸರಿ ಹೊರಟು ನಿಲ್ಲುತ್ತಾರೆ ಇಂತಹ ಅಂದಾಭಿಮಾನದ ಪರಿಣಾಮವಾಗಿಯೇ ಈ ದುರ್ಘಟನೆ ಸಂಭವಿಸಿದೆ.
    ಸಿನಿಮಾ ತಾರೆಯರು ಮತ್ತು ಕ್ರಿಕೆಟ್ ಕಲಿಗಳು ಹಣಕ್ಕಾಗಿ ಆಟ ಆಡುತ್ತಾರೆ, ನಟಿಸುತ್ತಾರೆ ಎನ್ನುವ ಸಾಮಾನ್ಯ ವಿಷಯವನ್ನು ಮರೆತವರಂತೆ ಆಡುವ ಅಭಿಮಾನಿಗಳಿಂದಾಗಿ ಇಂತಹ ಘಟನೆ ನಡೆದಿದೆ ಈ ಅಭಿಮಾನಿಗಳ ಹುಚ್ಚು ಹೊಳೆಯಲ್ಲಿ ತೇಲಿ ಹೋಗಿ ಪ್ರಚಾರ ಗಿಟ್ಟಿಸಿಕೊಳ್ಳಬೇಕು ಎಂದು ಸರ್ಕಾರದಲ್ಲಿದ್ದವರು ಯೋಚಿಸಿ ಯಾವುದೇ ಮುಂಜಾಗ್ರತೆ ಮತ್ತು ಪೂರ್ವ ತಯಾರಿ ಇಲ್ಲದೆ ಕಾರ್ಯರೂಪಕ್ಕೆ ಇಳಿದ ಪರಿಣಾಮ ಈ ಘಟನೆ ನಡೆದಿದೆ.
    ದೊಡ್ಡ ಮಟ್ಟದ ಅಭಿಮಾನಿಗಳ ಪಡೆಯನ್ನು ಹೊಂದಿರುವ ತಂಡವನ್ನು ಅಭಿನಂದಿಸುವ ಮೂಲಕ ಬಾರಿ ಪ್ರಚಾರ ಗಿಟ್ಟಿಸಲು ಸರ್ಕಾರದ ಕೆಲವರು ಪ್ರಯತ್ನ ನಡೆಸಿದರೆ ಅವರ ಜೊತೆಗೆ ಪೈಪೋಟಿಗೆ ಬಿದ್ದವರಂತೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಕೂಡ ಇಂತಹ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದು ಈ ದುರಂತಕ್ಕೆ ಕಾರಣವಾಗಿದೆ.
    ಐಪಿಎಲ್ ಟ್ರೋಫಿ ಗೆದ್ದು ಅಹಮದಾಬಾದ್ ನಿಂದ ವಿಶೇಷ ವಿಮಾನದಲ್ಲಿ ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದ ಆಟಗಾರರನ್ನು
    ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ರೋಡ್‌ ಶೋ ಮೂಲಕ ಕರೆ ತರಲು ಯೋಜಿಸಲಾಗಿತ್ತು.ಆದರೆ ಭದ್ರತೆಯ ಕಾರಣದಿಂದಾಗಿ ವಿಕ್ಟರಿ ಪರೇಡ್‌ಗೆ ಪೊಲೀಸ್‌ ಇಲಾಖೆ ಅನುಮತಿ ನೀಡಿರಲಿಲ್ಲ.
    ಆದರೆ ಸರ್ಕಾರ ರೋಡ್‌ ಶೋ ಬದಲಾಗಿ ವಿಧಾನಸೌಧದ ಮುಂಭಾಗದಲ್ಲಿ ಅಭಿನಂದನಾ ಕಾರ್ಯಕ್ರಮ ಸೇರ್ಪಡೆ ಮಾಡಿತ್ತು. ಆತುರಾತುರವಾಗಿ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿದರು ಕೂಡ ಪೊಲೀಸ್ ಇಲಾಖೆ ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಂತೆ ವ್ಯಾಪಕ ಮುಂಜಾಗ್ರತೆ ವಹಿಸಿ ಸಾಕಷ್ಟು ಪ್ರಮಾಣದಲ್ಲಿ ಭದ್ರತಾ ಕ್ರಮಗಳನ್ನು ಕೈಗೊಂಡಿತ್ತು ಹೀಗಾಗಿ ಇಲ್ಲಿ ಕಾರ್ಯಕ್ರಮ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ನಡೆಯಿತು ಜೊತೆಯಲ್ಲಿ ಮಳೆ ಸುರಿದ ಪರಿಣಾಮ ಅತ್ಯಂತ ಬೇಗ ಕಾರ್ಯಕ್ರಮ ಮುಕ್ತಾಯಗೊಂಡಿತು.
    ಮತ್ತೊಂದೆಡೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆ ಆತುರದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸುವ ತೀರ್ಮಾನ ಕೈಗೊಂಡಿದೆ. ಬೆಂಗಳೂರು ಪೊಲೀಸರು ಆರಂಭದಲ್ಲಿ ಇದಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ ಆದರೆ ಕ್ರಿಕೆಟ್ ಆಡಳಿತ ಮಂಡಳಿ ವಿಧಾನ ಪರಿಷತ್ ಸದಸ್ಯರೊಬ್ಬರ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಿದೆ ಆರ್‌ಸಿಬಿ ತಂಡದಲ್ಲಿರುವ ಕೆಲವು ವಿದೇಶಿ ಆಟಗಾರರು ನಾಳೆ ತಮ್ಮ ದೇಶಗಳಿಗೆ ಮರಳುತ್ತಿದ್ದಾರೆ ಹೀಗಾಗಿ ಅವರಿಲ್ಲದೆ ವಿಜಯೋತ್ಸವ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಹೀಗಾಗಿ ಹಿಂದೆ ವಿಜಯೋತ್ಸವ ಆಚರಿಸಲು ಅನುಮತಿ ಕೊಡಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
    ಕ್ರೀಡಾ ಚಟುವಟಿಕೆಗಳ ಬಗ್ಗೆ ಹೆಚ್ಚು ಆಸಕ್ತಿ ಇರುವ ವಿಧಾನ ಪರಿಷತ್ ಸದಸ್ಯರೊಬ್ಬರು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮೇಲೆ ಪ್ರಬಲವಾಗಿ ಒತ್ತಡ ಹೇರಿ ಕಾರ್ಯಕ್ರಮಕ್ಕೆ ಅನುಮತಿ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಈ ವೇಳೆ ಬೆಂಗಳೂರು ಪೊಲೀಸರು ಭದ್ರತಾ ವೆಚ್ಚ ಎಂದು ಕ್ರಿಕೆಟ್ ಆಡಳಿತ ಮಂಡಳಿಗೆ 36 ಲಕ್ಷ ರೂಪಾಯಿ ಶುಲ್ಕ ವಿಧಿಸಲು ಮುಂದಾದರೂ ಕೂಡ ಅದನ್ನು ವಿಧಿಸದಂತೆ ತಡೆ ಹಿಡಿಯುವಲ್ಲಿ ಈ ವಿಧಾನ ಪರಿಷತ್ ಸದಸ್ಯರು ಪ್ರಮುಖ ಪಾತ್ರ ವಹಿಸಿದರು ಎಂದು ಗೊತ್ತಾಗಿದೆ.
    ದುರಂತಕ್ಕೆ ಕಾರಣ:
    ಇದಾದ ನಂತರ ಅನುಮತಿ ಗಿಟ್ಟಿಸಿಕೊಂಡ ಕ್ರಿಕೆಟ್ ಆಡಳಿತ ಮಂಡಳಿ ವಿಜಯೋತ್ಸವ ಆಚರಣೆ‌ ವೀಕ್ಷಿಸಲು ಸಾರ್ವಜನಿಕರು ಯಾವುದೇ ಶುಲ್ಕ ಪಾವತಿಸದೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಪ್ರಕಟಿಸಿತು. ಆನಂತರ ವೆಬ್ ಸೈಟ್ ಒಂದನ್ನು ನೀಡಿ ಇದರಲ್ಲಿ ನೋಂದಣಿ ಮಾಡಿಕೊಂಡರೆ ಉಚಿತವಾಗಿ ಪಾಸ್ ನೀಡಲಾಗುವುದು ಎಂದು ಹೇಳಿ ಪಾಸ್ ಇದ್ದವರಿಗೆ ಮಾತ್ರ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ಎಂದು ಘೋಷಿಸಿತು.
    ಅದರಂತೆ ಸಾವಿರಾರು ಸಂಖ್ಯೆಯಲ್ಲಿ ಕ್ರೀಡಾಂಗಣದತ್ತ ಅಭಿಮಾನಿಗಳು ಧಾವಿಸಿ ಬಂದರು ಪಾಸ್ ಪಡೆದು ಕ್ರೀಡಾಂಗಣ ಪ್ರವೇಶಿಸಲು
    ಮಧ್ಯಾಹ್ನ ಮೂರು ಗಂಟೆಯವರೆಗೆ ಅಭಿಮಾನಿಗಳು ಸರದಿಯಲ್ಲೇ ನಿಂತುಕೊಂಡಿದ್ದರು.
    ಈ ನಡುವೆ ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ‌ ಮಳೆಯ ಕಾರಣಕ್ಕೆ ಬೇಗನೆ ಮುಕ್ತಾಯಗೊಂಡಿದ್ದರಿಂದ ಅಲ್ಲಿ ಸೇರಿದ್ದ ಸಾವಿರಾರು ಸಂಖ್ಯೆಯ ಚಿನ್ನಸ್ವಾಮಿ ಕ್ರೀಡಾಂಗಣದ ಧಾವಿಸಿ ಬಂದರು
    ಸಾವಿರಾರು ಸಂಖ್ಯೆಯಲ್ಲಿ ಜನರು ಕ್ರೀಡಾಂಗಣದತ್ತ ಧಾವಿಸಿ ಬರುತ್ತಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು ಕೆಲವು ಗೇಟ್‌ಗಳಿಂದ ಅಭಿಮಾನಿಗಳನ್ನು ಒಳಗಡೆ ಬಿಡುತ್ತಿದ್ದರು. ಕಾರ್ಯಕ್ರಮ ಉಚಿತ ಎಂದು ಹೇಳಿದ್ದರೂ ಯಾಕೆ ಉಳಿದ ಗೇಟ್‌ಗಳಿಂದ ಜನರನ್ನು ಒಳಗಡೆ ಬಿಡುತ್ತಿಲ್ಲ ಎಂದು 18,19,20 ಗೇಟ್‌ನಲ್ಲಿದ್ದ ಅಭಿಮಾನಿಗಳು ಆಯೋಜಕರು ಮತ್ತು ಪೊಲೀಸರನ್ನು ಪ್ರಶ್ನೆ ಮಾಡಲು ಆರಂಭಿಸಿದ್ದಾರೆ.
    ಗೇಟ್‌ಗಳ ಬಳಿ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗುತ್ತಿದ್ದಂತೆ ಕೆಲವರು ಸ್ಟೇಡಿಯಂ ಕಾಂಪೌಂಡ್‌ ಹತ್ತಿ ಒಳ ನುಗ್ಗಲು ಆರಂಭಿಸಿದ್ದಾರೆ. ಇದರಿಂದ ತಳ್ಳಾಟ ನೂಕಾಟ ಆರಂಭವಾಗುತ್ತಿದ್ದಂತೆ ದಿಢೀರ್‌ ಆಗಿ ಉಳಿದ ಗೇಟ್‌ ಓಪನ್‌ ಮಾಡಲಾಗಿದೆ. ಓಪನ್‌ ಮಾಡಿದ್ದೇ ತಡ ಜನ ಒಳಗಡೆ ನುಗ್ಗಲು ಓಡಿದ್ದಾರೆ. ಓಡುವ ವೇಳೆ ಕೆಳಗೆ ಕೆಲವರು ಬಿದ್ದಿದ್ದಾರೆ. ಬಿದ್ದವರ ಮೇಲೆ ಓಡಿದ್ದರಿಂದ ದುರಂತ ಸಂಭವಿಸಿದೆ.
    ಈ ವೇಳೆ ಕೇವಲ ಕೆಲವೇ ಸಂಖ್ಯೆಯಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಲಾಗದೆ ಪರದಾಡಿದ್ದಾರೆ.
    ಹಿರಿಯ ಅಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪೊಲೀಸರು ಅತಿ ಗಣ್ಯ ವ್ಯಕ್ತಿಗಳು ಪಾಲ್ಗೊಂಡಿದ್ದ ವಿಧಾನಸೌಧದ ಮುಂಭಾಗದಲ್ಲಿನ ಸಮಾರಂಭದ ಭದ್ರತೆಗೆ ನಿಯೋಜನೆಗೊಂಡಿದ್ದು ಅವರೆಲ್ಲ ಕರ್ತವ್ಯ ಮುಗಿಸಿ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಬರಲು ಸಮಯ ಹಿಡಿದಿದೆ ಆ ವೇಳೆಗಾಗಲೇ ಈ ದುರಂತ ಸಂಭವಿಸಿ ಹೋಗಿದೆ

    Verbattle
    Verbattle
    Verbattle
    ಕರ್ನಾಟಕ ಚಿನ್ನ Bengaluru ಸರ್ಕಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಾಲ್ತುಳಿತಕ್ಕೆ ಪ್ರತಾಪ್ ಸಿಂಹ ಕೊಟ್ಟ ಕಾರಣ ಕೇಳಿ.
    Next Article ದಯಾನಂದ್ ಗೆ ಯಾಕೆ ಶಿಕ್ಷೆ !
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Thomaszox on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Robertram on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.