ಬೆಂಗಳೂರು,ಏ. 26- ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ.
ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.
ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಹೀಗಿರುವಾಗಲೇ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್ಗೆ ಪಿಐಎಲ್ ಅರ್ಜಿ ಸಲ್ಲಿಸಿದೆ.
ಸಿಇಟಿ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಹಲವೆಡೆ ಇಂತಹ ಘಟನೆಗಳು ನಡೆದಿವೆ. ಸಂವಿಧಾನಬಾಹಿರ ಕೃತ್ಯದಿಂದ ಶಿಕ್ಷಣ ಹಕ್ಕು ವಂಚನೆಯಾಗಿದೆ. ಈ ವಿದ್ಯಾರ್ಥಿಗಳಿಗೆ ಮರು ಸಿಇಟಿ ಪರೀಕ್ಷೆ ನಡೆಸುವಂತೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಶ್ರೀರಂಗ ಮನವಿ ಮಾಡಿದ್ದಾರೆ. ಸದ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದ್ದು, ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಿದೆ.
Previous Articleಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
Next Article KMF ಅಧ್ಯಕ್ಷರಾಗಲು ಡಿಕೆ ಸುರೇಶ್ ತಯಾರಿ
