Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನ ಸಾಮಾನ್ಯರೇ ಎಚ್ಚರ !
    Viral

    ಜನ ಸಾಮಾನ್ಯರೇ ಎಚ್ಚರ !

    vartha chakraBy vartha chakraMay 12, 202525 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.12-
    ಭಾರತ-ಪಾಕ್ ನಡುವೆ ಉಂಟಾಗಿರುವ ಸಂಘರ್ಷ ಸನ್ನಿವೇಶದಲ್ಲಿ ಸೈಬರ್ ವಂಚಕರ ಕುರಿತು ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಮನವಿ ಮಾಡಿದ್ದಾರೆ.
    ಉಭಯ ದೇಶಗಳ ನಡುವಿನ ಪರಿಸ್ಥಿತಿಯ ಕುರಿತು ಜನಸಾಮಾನ್ಯರ ಕುತೂಹಲವನ್ನು ಬಳಸಿಕೊಳ್ಳುವ ಸೈಬರ್ ವಂಚಕರು ಸುಳ್ಳು ಸುದ್ದಿ, ಫಿಶಿಂಗ್, ನಕಲಿ ಲಿಂಕ್‌ಗಳ ಮೂಲಕ ವಂಚಿಸುವ ಸಾಧ್ಯತೆಗಳಿವೆ ಎಂದು ಅವರು  ಎಚ್ಚರಿಸಿದ್ದಾರೆ.
    ಇಂಡೋ-ಪಾಕ್ ಸಂಘರ್ಷ ಸನ್ನಿವೇಶದ ಕುರಿತ ಎಕ್ಸ್‌ಕ್ಲ್ಯೂಸಿವ್ ದೃಶ್ಯಗಳು, ವೈರಲ್ ವಿಡಿಯೋ, ಆಫರ್ ಕುರಿತ ಸಂದೇಶಗಳು ನಕಲಿ ವೆಬ್‌ಸೈಟ್‌ಗಳ ಮೂಲಕ ಸೃಷ್ಟಿಯಾಗಿರಬಹುದು. ಹಾಗೂ ನಿಮ್ಮ ಫೋನ್‌ಗಳಿಗೆ ಮಾಲ್‌ವೇರ್‌ಗಳನ್ನು ಇನ್‌ಸ್ಟಾಲ್ ಮಾಡಬಹುದು. ನಕಲಿ ಲಿಂಕ್‌ಗಳ ಮೂಲಕ ಸೇನೆಯಲ್ಲಿ ಕೆಲಸದ ಅಪ್ಲಿಕೇಶನ್ ಹೆಸರಿನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಸೈಬರ್ ವಂಚಕರು ಕಳುವು ಮಾಡಬಹುದು. ತುರ್ತಾಗಿ ಆರ್ಮಿ ನೇಮಕಾತಿ ಮತ್ತಿತರ ಕುರಿತು ಅಪರಿಚಿತರಿಂದ ಮೇಲ್‌ಗಳನ್ನು ಸ್ವೀಕರಿಸಿದರೆ ಅವುಗಳನ್ನು ತೆರೆಯದಿರಿ. ಅವುಗಳ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಕದಿಯುವ ಸಾಧ್ಯತೆಗಳಿವೆ ಎಂದು
    ಎಚ್ಚರಿಸಿದ್ದಾರೆ
    ವಾಟ್ಸ್ಆ್ಯಪ್‌ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಬರುವ ಅಪರಿಚಿತ ಕರೆ ಅಥವಾ ಸಂದೇಶಗಳನ್ನು ತೆರೆಯದಿರಿ.
    ನಿಮ್ಮ ಪರಿಚಿತರಿಂದಲೇ ಅನುಮಾನಾಸ್ಪದ ಫೈಲ್‌ಗಳನ್ನು ಸ್ವೀಕರಿಸಿದರೂ ಸಹ ತೆರೆಯದಿರಿ ಹಾಗೂ ಇತರರೊಂದಿಗೆ ಹಂಚಿಕೊಳ್ಳದಿರಿ, ಬದಲಿಗೆ ಅವುಗಳನ್ನು ಡಿಲೀಟ್ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.
    ಸಾರ್ವಜನಿಕರ ಎಚ್ಚರಿಕೆಯಿಂದ ಭಾರತವನ್ನು ಸುರಕ್ಷಿತವಾಗಿರಿಸಲು ಸಹಾಯವಾಗಲಿದೆ. ಸಾರ್ವಜನಿಕರು ಸುರಕ್ಷಿತವಾಗಿ ಎಚ್ಚರವಾಗಿರುವ ಮೂಲಕ ಈ ಕಠಿಣ ಸಂದರ್ಭದಲ್ಲಿ ಸೈಬರ್ ವಂಚಕರನ್ನು ನಾವು ಒಟ್ಟಾಗಿ ಎದುರಿಸಬಹುದು ಎಂದು ಕಮೀಷನರ್ ತಿಳಿಸಿದ್ದಾರೆ.
    ಎಚ್ಚರಿಕೆ:
    *ಎಪಿಕೆ ಫೈಲ್‌ಗಳನ್ನು ತೆರೆಯದಿರಿ, ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಲು ಅಧಿಕೃತವಾದ ಪ್ಲೇ-ಸ್ಟೋರ್‌ನ್ನು ಬಳಸಿ. ಸೂಕ್ಷ್ಮ ಹಾಗೂ ಎಕ್ಸ್‌ಕ್ಲ್ಯೂಸೀವ್ ಸುದ್ದಿ, ವಿಡಿಯೋಗಳನ್ನೊಳಗೊಂಡಿದೆ ಎನ್ನಲಾದ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ.
    *ಅಪರಿಚಿತ, ಅನುಮಾನಾಸ್ಪದ ಸಂದೇಶಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಅಂತಹ ವಾಟ್ಸ್ಆ್ಯಪ್‌ ಗ್ರೂಪ್‌ಗಳ ಕುರಿತು ಎಕ್ಸಿಟ್, ರಿಪೋರ್ಟ್ ಮತ್ತು ಡಿಲಿಟ್ ಸೂತ್ರ ಅನುಸರಿಸಿ.
    *ವೆರಿಫೈಡ್‌ ಅಲ್ಲದ ವಿಚಾರಗಳನ್ನು ರಿಪೋರ್ಟ್ ಮಾಡಿ.
    *ವಾಟ್ಸ್ಆ್ಯಪ್‌ ಸೆಕ್ಯೂರಿಟಿ ಸೆಟ್ಟಿಂಗ್ಸ್ ಬಳಸಿ, ಮೀಡಿಯಾ (ಫೋಟೋ, ವಿಡಿಯೋ, ಆಡಿಯೋ ಹಾಗೂ ಡಾಕ್ಯುಮೆಂಟ್) ಆಟೋ ಡೌನ್‌ಲೋಡ್ ಆಫ್ ಮಾಡಿ.
    *ವಾಟ್ಸ್ಆ್ಯಪ್‌ ಸೇರಿದಂತೆ ನಿಮ್ಮ ಎಲ್ಲಾ ಖಾತೆಗಳಿಗೆ 2 ಫ್ಯಾಕ್ಟರ್ ಅಥೆಂಟಿಕೇಶನ್ ಸೆಟ್ಟಿಂಗ್ಸ್ ಚಾಲ್ತಿಯಲ್ಲಿರಿಸುವ ಮೂಲಕ ಹೆಚ್ಚುವರಿ ಸೆಕ್ಯೂರಿಟಿ ಖಚಿತಪಡಿಸಿಕೊಳ್ಳಿ.
    *ಅಪರಿಚಿತರ ಮೂಲಕ ಸ್ವೀಕರಿಸುವ ಮೇಲ್‌ಗಳನ್ನು ತೆರೆಯದಿರಿ, ಮುಖ್ಯವಾಗಿ ತುರ್ತು ವಿಚಾರ, ಇಂಡೋ-ಪಾಕ್ ಯುದ್ಧ ಸನ್ನಿವೇಶದ ಕುರಿತು ಎಂಬ ತಲೆಬರಹವಿರುವ ಮೇಲ್‌ಗಳನ್ನು ತೆರೆಯಲೇಬೇಡಿ.
    *ಅನುಮಾನಾಸ್ಪದ ಲಿಂಕ್‌ಗಳ ಕುರಿತು ಎಚ್ಚರವಿರಲಿ, ವಂಚಕರು ಅಧಿಕೃತ ಸಂಸ್ಥೆಗಳ ಹೆಸರಿನಲ್ಲಿ ಮೇಲ್ ಸಂದೇಶಗಳನ್ನು ರವಾನಿಸಬಹುದು.
    *ಅಪ್‌ಡೇಟೆಡ್ ಆ್ಯಂಟಿ-ವೈರಸ್ ಸಾಫ್ಟ್‌ವೇರ್‌, ಸ್ಪ್ಯಾಮ್ ಫಿಲ್ಟರ್‌ಗಳನ್ನು ಬಳಸಿ.
    *ನಿಮ್ಮ ಅತಿಮುಖ್ಯ ಡೇಟಾಗಳನ್ನು ಕ್ಲೌಡ್ ಅಥವಾ ಹೆಚ್ಚುವರಿ ಸ್ಟೋರೇಜ್‌ನಲ್ಲಿ ಬ್ಯಾಕ್‌ಅಪ್ ಇರಿಸುವುದು ಸೂಕ್ತ.
    *ಸಾಫ್ಟ್‌ವೇರ್ ಅಪ್‌ಡೇಟ್ ಮೂಲಕ ನಿಮ್ಮ ಮಾಹಿತಿಗಳನ್ನು ಸುರಕ್ಷಿತವಾಗಿರಿಸಿ.
    ವೆರಿಫೈಡ್ ಅಲ್ಲದ ಸುದ್ದಿ, ವಿಚಾರಗಳನ್ನು ಹಂಚಿಕೊಳ್ಳದಿರಿ, ಅಧಿಕೃತ ಸಾಮಾಜಿಕ ಜಾಲತಾಣ ಖಾತೆ, ವೆಬ್‌ಸೈಟ್‌ಗಳ ಮೂಲಕ ಖಚಿತಪಡಿಸಿಕೊಳ್ಳಿ.
    *ಈ ರೀತಿಯ ಸೈಬರ್ ದಾಳಿಗೊಳಗಾದರೆ ಆತಂಕಪಡಬೇಡಿ, ಸೈಬರ್ ಕ್ರೈಂ ಸಹಾಯವಾಣಿ (1930) ಯನ್ನು ಸಂಪರ್ಕಿಸಿ, ಅಥವಾ cybercrime.gov.in ನಲ್ಲಿ ರಿಪೋರ್ಟ್ ಮಾಡಿ.

    Verbattle
    Verbattle
    Verbattle
    crime g m Bengaluru ವೈರಲ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಯುದ್ದ ಆಗಬಹುದು ಹುಷಾರ್ !
    Next Article ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • AnthonyTot on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Daviddek on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.