Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಮಾಲಿಗುಡ್ಡ ನೋಡೋದೊಂದೇ ಬಾಕಿ
    ಸುದ್ದಿ

    ಜಮಾಲಿಗುಡ್ಡ ನೋಡೋದೊಂದೇ ಬಾಕಿ

    vartha chakraBy vartha chakraMay 5, 2022Updated:May 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಭಿನ್ನ ಕಥಾಹಂದರ ಹೊಂದಿರುವ‌ ಡಾಲಿ ಧನಂಜಯ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ “ಜಮಾಲಿಗುಡ್ಡ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ಬಿಝಿಯಾಗಿದೆ.
    ಜಮಾಲಿಗುಡ್ಡ ಸಿನಿಮಾವನ್ನು ಕುಶಾಲ್‌ ಗೌಡ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ನಿಹಾರಿಕಾ ಮೂವೀಸ್‌ ಮೂಲಕ ಶ್ರೀಹರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
    ಇನ್ನು, ಟೈಟಲ್ಲೇ ಹೇಳುವಂತೆ, “ಜಮಾಲಿ ಗುಡ್ಡ’ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಒಂದಷ್ಟು ಘಟನೆಗಳು, ಪಾತ್ರಗಳ ಸುತ್ತ ಇಡೀ ಸಿನಿಮಾ ನಡೆಯುತ್ತದೆ. ಕೋವಿಡ್‌ ಮೊದಲನೇ ಲಾಕ್‌ಡೌನ್‌ ನಿರ್ದೇಶಕ ಕುಶಾಲ್‌ ಗೌಡ ಮಾಡಿಕೊಂಡಿದ್ದ ಕಥೆ ಸುಮಾರು ಎರಡು ವರ್ಷಗಳ ಬಳಿಕ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ.
    “ಜಮಾಲಿ ಗುಡ್ಡ’ ಚಿತ್ರದ ಟೈಟಲ್‌ಗೆ “ಒನ್ಸ್‌ ಅಪಾನ್‌ ಎ ಟೈಮ್‌’ ಎಂಬ ಟ್ಯಾಗ್‌ ಲೈನ್‌ ಇದ್ದು, 1990ರ ದಶಕದ ಹಿನ್ನೆಲೆಯಲ್ಲಿ ಇಡೀ ಚಿತ್ರದ ಕಥೆ ನಡೆಯುತ್ತದೆ. “ಜಮಾಲಿ ಗುಡ್ಡ’ ಚಿತ್ರದ ಕಥೆಯಲ್ಲಿ ಇರುವಂಥ ಕಾಲ್ಪನಿಕ ಊರಾದರೂ, ಇಲ್ಲಿ ಒಂದು ವಿಭಿನ್ನ ಸಂಸ್ಕೃತಿ, ವಿಭಿನ್ನ ವ್ಯಕ್ತಿತ್ವಗಳ ಅನಾವರಣವಾಗಲಿದೆ. ಇದರಲ್ಲಿ ಒಂದು ಜರ್ನಿ ಇದೆ. ಎಮೋಶನ್ಸ್‌ ಇದೆ. ಅದೆಲ್ಲವನ್ನೂ ದೃಶ್ಯದಲ್ಲಿ ಕಟ್ಟಿಕೊಡುತ್ತಿದ್ದೇವೆ. ಅದು ಹೇಗಿರಲಿದೆ ಅನ್ನೋದನ್ನ ತೆರೆಮೇಲೆ ನೋಡಬೇಕು’ ಎನ್ನುತ್ತದೆ ಚಿತ್ರತಂಡ.
    ನಟ ಡಾಲಿ ಧನಂಜಯ್‌, ಅದಿತಿ ಪ್ರಭುದೇವ, ಪ್ರಕಾಶ್‌ ಬೆಳವಾಡಿ, ಭಾವನಾ ರಾಮಣ್ಣ, ಪ್ರಾಣ್ಯಾ ಪಿ. ರಾವ್‌, ನಂದಗೋಪಾಲ್‌, ಯಶ್‌ ಶೆಟ್ಟಿ, ಸತ್ಯಣ್ಣ, ತ್ರಿವೇಣಿ ರಾವ್‌ ಮೊದಲಾದ ಕಲಾವಿದರು “ಜಮಾಲಿ ಗುಡ್ಡ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
    ಚಿತ್ರದ ಮೂರು ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತ ಸಂಯೋಜಿಸಿದ್ದು, ಯೋಗರಾಜ್‌ ಭಟ್‌, ಜಯಂತ ಕಾಯ್ಕಿಣಿ, ಕುಶಾಲ್‌ ಗೌಡ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಸೋನು ನಿಗಮ್‌, ಶ್ರೇಯಾ ಘೋಷಾಲ್‌, ವಿಜಯ್‌ ಯೇಸುದಾಸ್‌ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. “ಜಮಾಲಿ ಗುಡ್ಡ’ದ ದೃಶ್ಯಗಳಿಗೆ ಮಾಸ್ತಿ ಮತ್ತು ಕುಶಾಲ್‌ ಗೌಡ ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಕಾರ್ತಿಕ್‌ ಎಸ್‌. ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ.

    Verbattle
    Verbattle
    Verbattle
    dhananjay jamali gudda dhananjay recent movie dolly dhananjay kannada movie Entertainment jamali gudda kannada movies
    Share. Facebook Twitter Pinterest LinkedIn Tumblr Email WhatsApp
    Previous Articleಮಾವಿನಹಣ್ಣಿಗೂ ಬಂತು ಬುಕ್ಕಿಂಗ್
    Next Article ಬಡವನ ಗರಡಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Briansix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.