ತೆಲಂಗಾಣ, ಅಕ್ಟೋಬರ್ 17
ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ತೆಲಂಗಾಣದ DSP ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದರಿಂದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಗ್ರೂಪ್ 1 ದರ್ಜೆಯ ಹುದ್ದೆಯನ್ನು ನೀಡುವುದಾಗಿ ಘೋಷಿಸಿದ್ದು ಈಗ ಅಧಿಕಾರ ಸ್ವೀಕರಿಸಿದ್ದಾರೆ.
ಈ ವೇಳೆ ಮೊಹಮ್ಮದ್ ಸಿರಾಜ್‌ಗೆ ಸಂಸದ ಎಂ ಅನಿಲ್ ಕುಮಾರ್ ಯಾದವ್ ಮತ್ತು ಮತ್ತೋರ್ವ ಸಂಸದ ಮೊಹಮ್ಮದ್ ಫಾಹೀಮುದ್ದೀನ್ ಖುರೇಶಿ ಅಭಿನಂದನೆ ಸಲ್ಲಿಸಿದ್ದಾರೆ.