ಬೆಂಗಳೂರು,ಆ.26-
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆರೆಯಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಶಿಪ್ಟ್ ಅಗಲಿದ್ದಾರೆ. ಅಷ್ಟೇ ಅಲ್ಲ ಪರಪ್ಪನ ಅಗ್ರಹಾರ ಜೈಲಿನ ಏಳು ಜನ ಸಿಬ್ಬಂದಿ ಅಮಾನತುಗೊಂಡು ಮನೆ ಸೇರಲಿದ್ದಾರೆ.
ಪರಪ್ಪನ ಅಗ್ರಹಾರ ಜೈಲಲ್ಲಿರುವ ನಟ ದರ್ಶನ್‌ಗೆ ರಾಜಾತಿಥ್ಯ ದೊರೆಯುತ್ತಿರುವ ಫೋಟೋ,ವಿಡಿಯೋ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಿದೆ.
ಇದರ ಜೊತೆಗೆ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಬಗ್ಗೆ ಆಂತರಿಕ ತನಿಖೆ ನಡೆಸುವ ಜೊತೆಗೆ ನಟನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ರಾಜ್ಯದ ಬೇರೆ ಜೈಲಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲು
ಗೃಹ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದಾರೆ.
ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವುದು ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿರುವುದು ಬಯಲಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಪ್ರಕರಣದ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್ ನಟ
ದರ್ಶನ್ ಗೆ ರಾಜಾತಿಥ್ಯದ ಸಂಬಂಧ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ
ಘಟನೆಯ ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು.ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳನ್ನು ವರ್ಗಾವಣೆ ಮಾಡಲಾಗುವುದು.
ರಾಜ್ಯದ ಎಲ್ಲಾ ಬಂಧಿಖಾನೆಗಳಲ್ಲಿ ಸಿಸಿಟಿವಿ ಹಾಕಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆಎಂದು ಬೇಸರ ವ್ಯಕ್ತಪಡಿಸಿದರು.
Previous Articleದರ್ಶನ್ ಗೆ ಜೈಲಿನಲ್ಲಿ ಬಿರಿಯಾನಿ ಊಟ.
Next Article ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.