Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಪ್ರಕರಣ: ಸರ್ಕಾರಕ್ಕೆ ನೋಟಿಸ್.
    Trending

    ದರ್ಶನ್ ಪ್ರಕರಣ: ಸರ್ಕಾರಕ್ಕೆ ನೋಟಿಸ್.

    vartha chakraBy vartha chakraJuly 10, 202412 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.10- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರು ಮನೆ ಊಟದ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
    ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠವು. ಅರ್ಜಿದಾರರ ಮನವಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಮತ್ತು ಜೈಲು ಮೇಲ್ವಿಚಾರಣಾಧಿಕಾರಿಗಳಿಗೆ ಸೂಚಿಸಿ ಜು.18ಕ್ಕೆ ವಿಚಾರಣೆಯನ್ನು ಮುಂದೂಡಿದೆ.
    ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೊಳಗಾದ ಕೈದಿಗಳಿಗೆ ಬೇರೆ ಬೇರೆ ರೀತಿಯ ಮಾರ್ಗಸೂಚಿಗಳಿವೆ. ಅವುಗಳನ್ನು ತಿಳಿದುಕೊಂಡು ನ್ಯಾಯಪೀಠ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿಚಾರಣೆಯನ್ನು ಜು.18 ಮುಂದೂಡಿತು
    ಕಾನೂನಿನಲ್ಲಿ ಅವಕಾಶವಿದೆ ಎಂಬುದನ್ನು ತೋರಿಸುವ ಅಗತ್ಯವಿಲ್ಲ. ಈ ಸಂಬಂಧ ಇರುವ ಆದೇಶಗಳನ್ನು ತಿಳಿಸುವಂತೆ ನ್ಯಾಯಪೀಠ ಸೂಚನೆ ನೀಡಿತು. ಬಂಧೀಖಾನೆ ನಿಯಮಗಳನ್ನು ತಿಳಿಸಿ, ಅದರಂತೆ ಮುಂದುವರೆಸಲಾಗುವುದು. ಅಲ್ಲದೆ, ಕಾನೂನಿನಲ್ಲಿ ಅವಕಾಶವಿದ್ದರೆ ಮನೆ ಊಟ ಒದಗಿಸಲು ಸೂಚಿಸಲಾಗುವುದು, ಇಲ್ಲದಿದ್ದರೆ ಇಲ್ಲ ಎಂದು ಪೀಠ ಹೇಳಿತು.
    ಅಲ್ಲದೆ, ಈ ಸಂಬಂಧ ಇತರೆ ನ್ಯಾಯಾಲಯಗಳು ಇಲ್ಲದಿದ್ದಲ್ಲಿ ಆದೇಶಿಸಲಾಗುವುದು. ಎಲ್ಲವನ್ನೂ ಊಹೆಯ ಮೂಲಕ ಹೇಳುವಂತಿಲ್ಲ. ಕಾನೂನು ತಿಳಿದುಕೊಂಡು ಸರ್ಕಾರ ಈ ಸಂಬಂಧ ಆಕ್ಷೇಪಣೆ ಸಲ್ಲಿಸಲಿ, ಬಳಿಕ ಅದರಲ್ಲಿನ ಅಂಶಗಳನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಪೀಠ ತಿಳಿಸಿತು.
    ಅರ್ಜಿದಾರರ ಮನವಿ:
    ಕಾರಾಗೃಹದಲ್ಲಿ ನೀಡುತ್ತಿರುವ ಆಹಾರವು ಅರ್ಜಿದಾರರಿಗೆ ಸೂಕ್ತ ರೀತಿಯಲ್ಲಿ ಜೀರ್ಣವಾಗುತ್ತಿಲ್ಲ. ಹೀಗಾಗಿ, ಕೆಲವು ದಿನಗಳಿಂದ ಅತಿಸಾರದಿಂದ (ಭೇದಿ) ಬಳಲುತ್ತಿದ್ದಾರೆ. ಜೈಲಿನ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದ್ದ ಆಹಾರದಲ್ಲಿ ವಿಷಕಾರಿ ಸೂಕ್ಷ್ಮ ಜೀವಿಗಳು ಸೇರಿವೆ ಎಂದು ತಿಳಿಸಿದ್ದಾರೆ. ಜೊತೆಗೆ, ಅರ್ಜಿದಾರರು ತೂಕದಲ್ಲಿಯೂ ಇಳಿಕೆ ಆಗಿದ್ದಾರೆ. ಇದರಿಂದ ಕಾರಾಗೃಹದಲ್ಲಿ ವಿತರಣೆ ಮಾಡುತ್ತಿರುವ ಆಹಾರ ಸೇವನೆ ಮಾಡುವುದಕ್ಕೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ ಮನೆ ಆಹಾರ ತರಿಸಿಕೊಳ್ಳುವುದಕ್ಕೆ ಅವಕಶ ನೀಡಬೇಕು ಎಂದು ಜೈಲು ಅಧಿಕಾರಿಗಳಿಗೆ ಈಗಾಗಲೇ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
    ಆದರೆ, ಅಧಿಕಾರಿಗಳು ಹೈಕೋರ್ಟ್ ಆದೇಶವಿಲ್ಲದೆ, ಅರ್ಜಿದಾರರ ಕುಟುಂಬಸ್ಥರು ಮನೆಯಲ್ಲಿ ಸಿದ್ದಪಡಿಸಿದ ಆಹಾರವನ್ನು ಒದಗಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿಸಿ ನಿರಾಕರಿಸಿದ್ದಾರೆ. ಅರ್ಜಿದಾರರು ದೊಡ್ಡ ಪ್ರಮಾಣದಲ್ಲಿ ತೂಕ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
    ವೆಚ್ಚವೂ ಕಡಿಮೆ:
    ಅಲ್ಲದೆ, ಕರ್ನಾಟಕ ಬಂಧೀಖಾನೆ ಕಾಯಿದೆ 1963 ಸೆಕ್ಷನ್ 30ರ ಪ್ರಕಾರ ವಿಚಾರಣಾಧೀನ ಕೈದಿಗಳು ಜೈಲು ಅಧಿಕಾರಿಗಳ ಹೊರಗಡೆಯಿಂದ ಆಹಾರ, ಬಟ್ಟೆ ಮತ್ತು ಹಾಸಿಗೆಯನ್ನು ಪಡೆದುಕೊಳ್ಳುವುದಕ್ಕೆ ಅವಕಾಶವಿದೆ. ಜೊತೆಗೆ, ಅರ್ಜಿದಾರರು ಅಪರಾಧಿಯಾಗಿಲ್ಲ. ಆದ್ದರಿಂದ, ಊಟ, ಹಾಸಿಗೆ ಪುಸ್ತಕಗಳು ಮತ್ತು ಸುದ್ದಿ ಪತ್ರಿಕೆಗಳನ್ನು ಮನೆಯಿಂದ ತರಿಸಿಕೊಂಡಲ್ಲಿ ಸರ್ಕಾರದ ಖಜಾನೆಗೆ ಆಗುವ ವೆಚ್ಚವೂ ಕಡಿಮೆಯಾಗಲಿದೆ. ಅಲ್ಲದೆ, ಅರ್ಜಿದಾರರಿಗೆ ಮನೆ ಆಹಾರ ನೀಡದಿರುವ ಜೈಲು ಅಧಿಕಾರಿಗಳ ಕ್ರಮ ಅಮಾನವೀಯವಾಗಿದ್ದು, ಸಂವಿಧಾನದ ಪರಿಚ್ಛೇದ 21ರ ಬದುಕುವ ಹಕ್ಕು ಉಲ್ಲಂಘಿಸಿದಂತಾಗಲಿದೆ ಎಂದು ಅರ್ಜಿಯಲ್ಲಿ ಕೊರಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಆರೋಗ್ಯ ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚೆಡ್ಡಿ ಗ್ಯಾಂಗ್ ಗೆ ಗುಂಡಿಕ್ಕಿದ ಪೊಲೀಸ್.
    Next Article ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಖಚಿತ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Briansix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.