ಬೆಂಗಳೂರು,ಮಾ.21-
ರಾಜ್ಯದ ಮುಖ್ಯಮಂತ್ರಿ, ಸಚಿವರು ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಎಲ್ಲಾ ಶಾಸಕರ ವೇತನ ಮತ್ತಿತರ ಬಗ್ಗೆ ಶೇಕಡ ನೂರರಷ್ಟು ಹೆಚ್ಚಳವಾಗಿದೆ.
ಸಂಬಳ ಹೆಚ್ಚಳ ಮಾಡುವ ಮಸೂದೆ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆಯಾಗಿ ಯಾವುದೇ ಚರ್ಚೆ ಇಲ್ಲದೆ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.
ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು ಮತ್ತು ಶಾಸಕರ ವೇತನ, ಭತ್ಯೆಯನ್ನು ಶೇ.100ರಷ್ಟು ಸಂಬಳ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಎಲ್ಲರ ಸಂಬಳ ಶೇ.100ರಷ್ಟು ಹೆಚ್ಚಾಗಿದೆ.
ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ-2025, ಹಾಗೂ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು (ತಿದ್ದುಪಡಿ) ವಿಧೇಯಕ-2025 ನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡರೆ, ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಡನೆ ಮಾಡಿ ಅನುಮೋದನೆ ಪಡೆದುಕೊಂಡರು.
ಕಳೆದ 2022ರಲ್ಲಿ ಶಾಸಕರ ವೇತನ ಮತ್ತು ಭತ್ಯೆಗಳ ಪರಿಷ್ಕರಿಸಿತ್ತು. ಆಗ ಮಂಡಿಸಲಾಗಿದ್ದ ತಿದ್ದುಪಡಿ ವಿಧೇಯಕದಲ್ಲಿ ಬೆಲೆ ಸೂಚ್ಯಂಕ ಆಧಾರದಲ್ಲಿ 2023ರ ಏಪ್ರಿಲ್ 1ರಿಂದ 5 ವರ್ಷಕ್ಕೊಮ್ಮೆ ವೇತನ ವೇತನ ಹೆಚ್ಚಿಸುವ ಬಗ್ಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ, ಇದೀಗ 2 ವರ್ಷ ಪೂರ್ಣವಾಗುವ ಮೊದಲೇ ಶಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
ನೂತನ ಮಸೂದೆ ಅನ್ವಯ ಶಾಸಕರ ವೇತನ 40 ಸಾವಿರ ರೂ.ನಿಂದ 80 ಸಾವಿರ ರೂ.ಗೆ ಹೆಚ್ಚಳವಾಗಿದೆ. ವಿಧಾನಸಭಾಧ್ಯಕ್ಷ ಮತ್ತು ವಿಧಾನಪರಿಷತ್ ಸಭಾಪತಿ ವೇತನ 75 ಸಾವಿರ ರೂ.ನಿಂದ 1.25 ಲಕ್ಷ ರೂ. ವರೆಗೆ ಹೆಚ್ಚಳವಾಗಿದೆ.
ಮುಖ್ಯಮಂತ್ರಿ ವೇತನ ತಿಂಗಳಿಗೆ 75 ಸಾವಿರ ರೂನಿಂದ 1.50 ಲಕ್ಷ ರೂ.ಗೆ ಏರಿಕೆಯಾಗಲಿದೆ.ಸಚಿವರ ವೇತನ 60 ಸಾವಿರ ರೂ.ನಿಂದ 1.25 ಲಕ್ಷ ರೂ.ಗೆ ಏರಿಕೆಯಾಗಲಿದೆ.
Previous Articleಇನ್ನೂ ಮೂವರು ಮಂತ್ರಿಗಳಿಗೆ ಹನಿ ಟ್ರ್ಯಾಪ್
Next Article ಅರಣ್ಯ ಮಂತ್ರಿಯ ವಿನೂತನ ಪ್ರಯೋಗ