ಬೆಂಗಳೂರು.
ಬಸ್ಸಿನಲ್ಲಿ ಪ್ರಯಾಣಿಕರು ಪ್ರಯಾಣ ಮಾಡುತ್ತಿರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ಬಸ್ ನಿಲ್ಲಿಸಿದ ಚಾಲಕ ಬಸ್ ನಲ್ಲೇ ನಮಾಜ್ ಮಾಡಿದ್ದಾರೆ.
ಪ್ರಯಾಣಿಕರಿಂದ ತುಂಬಿರುವ ಬಸ್ ಮಾರ್ಗ ಮಧ್ಯೆ ನಿಲ್ಲಿಸಿದ ಚಾಲಕ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರಿಸಿ ಸಾಮಾಜಿಕ ಜಲಾತಾಣಗಳಲ್ಲಿ ಹರಿಬಿಟ್ಟಿದ್ದರು.
ಜಾಲತಾಣಗಳಲ್ಲಿ ಇದು ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ ಚಾಲಕನನ್ನು ಸೇವಿಯಿಂದ ಅಮಾನತು ಮಾಡಲಾಗಿದೆ.
ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ.
ಈ ಘಟನೆ ನಂತರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ತನಿಖೆಗೆ ಆದೇಶಿಸಿದ್ದರು. ಇದೀಗ ಹಾನಗಲ್ KSRTC ಘಟಕದ ಚಾಲಕ ಎಆರ್ ಮುಲ್ಲಾನನ್ನು ಕರ್ತವ್ಯಲೋಪ ಅಡಿಯಲ್ಲಿ ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
