ಬೆಳಗಾವಿ,ಜ. 22-
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳ ಕಳ್ಳಸಾಗಣೆ ಮಾರಾಟ ಮತ್ತೆ ಸದ್ದು ಮಾಡಿದೆ.ಕಳೆದ ಮೂರು ತಿಂಗಳುಗಳಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ.
ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.
ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳಾಗಿದ್ದಾರೆ.
ಶಿವಬಸಪ್ಪ ಮಗದುಮ್, ಕೊಲ್ಲಾಪುರ ಮತ್ತು ಕಾರವಾರದ ಕೆಲವು ಮಧ್ಯವರ್ತಿಗಳು ಸೇರಿ ಬಾಲಕನನ್ನು ಬೆಳಗಾವಿ ನಗರದ ದಿಲಶಾದ್ ಸಿಕಂದರ್ ತಹಸೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು.
ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರಿಗೆ ಗಂಡು ಮಗು ಬೇಕಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಸಂಗೀತಾ ಗುಡಪ್ಪ ಕಮ್ಮಾರ್ ಅವರನ್ನು ಮಗದುಮ್ ವಿವಾಹವಾಗಿದ್ದರು. ಮಗದುಮ್ ಅವರಿಗೆ ಈ ಹಿಂದೆ ಒಂದು ಮದುವೆಯಾಗಿದ್ದು, ಮಕ್ಕಳನ್ನು ಹೊಂದಿದ್ದರು. ಅವರ ಮಕ್ಕಳು ಆಗಾಗ್ಗೆ ಜಗಳವಾಡುತ್ತಿದ್ದರು ಮತ್ತು ಇದರಿಂದ ಬೇಸತ್ತು ಮಗದುಮ್ ಹುಡುಗನನ್ನು ಮಾರಾಟ ಮಾಡಿದ್ದರು ಎನ್ನಲಾಗಿದೆ.
ಈ ನಡುವೆ, ಬಾಲಕನ ತಾಯಿ ಸಂಗೀತಾ ಕಮ್ಮಾರ್ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಬೈಲಹೊಂಗಲ ಸಮೀಪದ ಗ್ರಾಮವೊಂದರಲ್ಲಿ ಬಾಲಕನನ್ನು ಪತ್ತೆ ಮಾಡಿದ್ದಾರೆ
3 Comments
buying clomid without prescription where to get clomid no prescription clomiphene cost cost of cheap clomid online how to get cheap clomid pill clomiphene sleep apnea can you get cheap clomiphene for sale
I’ll certainly return to read more.
inderal pill – propranolol where to buy methotrexate 10mg price