Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರ ಜೈಲಿನಿಂದ ನೇಮಕಾತಿ
    Viral

    ಪರಪ್ಪನ ಅಗ್ರಹಾರ ಜೈಲಿನಿಂದ ನೇಮಕಾತಿ

    vartha chakraBy vartha chakraJuly 17, 20252 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.17 :
    ಬೆಂಗಳೂರು ಕೊಯಮತ್ತೂರು ಸೇರಿದಂತೆ ದೇಶದ ಹಲವೆಡೆ ನಡೆದ ವಿಧ್ವಂಸಕ ಕೃತ್ಯಗಳ ಆರೋಪದಲ್ಲಿ ಬಂದಿತನಾಗಿ ಜೈಲು ಸೇರಿರುವ ಲಷ್ಕರ್ ಉಗ್ರ ಟಿ. ನಾಸಿರ್ ಜೈಲಿನಲ್ಲಿಯೇ ಹಲವರನ್ನು ಉಗ್ರ ಸಂಘಟನೆಗೆ ಸೇರ್ಪಡೆ ಮಾಡಿದ್ದಾನೆ.
    ಪರಪ್ಪನ ಅಗ್ರಹಾರ ಜೈಲಿನ ವೈದ್ಯ ಮತ್ತು ಸಿ ಎ ಆರ್ ಪೋಲಿಸ್ ಅಧಿಕಾರಿಯ ನೆರವಿನೊಂದಿಗೆ ಜೈಲಿನಿಂದ ಬಾಂಗ್ಲಾದೇಶಕ್ಕೆ ಪರಾರಿಯಾಗಲು ಸಂಚು ರೂಪಿಸಿದ್ದ ಈತ ಜೈಲಿನಲ್ಲಿ ನಡೆಸಿದ್ದ ಹಲವು ಅಕ್ರಮಗಳು ಬೆಳಕಿಗೆ ಬಂದಿದೆ.
    ಸಾಕಷ್ಟು ಪ್ರಭಾವಶಾಲಿ ಯಾಗಿದ್ದು, ಆತನ ಅಣತಿಯಂತೆ ಕೆಲಸ ಮಾಡುವ ಸಾಕಷ್ಟು ಮಂದಿ ಬೆಂಗಳೂರು ನಗರ ಸೇರಿದಂತೆ ದೇಶದ ಹಲವಡೆ ಇದ್ದಾರೆ ಎನ್ನಲಾಗಿದೆ. ಉಗ್ರ ಸಂಘಟನೆ ಸೇರಿದ ಯುವಕರಿಗೆ ಈತ ಅಪಾರ ಪ್ರಮಾಣದ ಹಣ ಪೂರೈಸುತ್ತಿದ್ದ ಎಂಬ ಅಂಶ ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ
    ಪರಪ್ಪನ ಅಗ್ರಹಾರ ಜೈಲಿಗೆ ವಿವಿಧ ಅಪರಾಧಗಳಲ್ಲಿ ಕೈದಿಗಳಾಗಿ ಬರುತ್ತಿದ್ದ ಯುವಕರನ್ನು ಸಂಪರ್ಕಿಸುತಿದ್ದ. ತನ್ನ ಸಂಘಟನೆ ಪರ ಕೆಲಸಕ್ಕೆ ಒಪ್ಪಿಕೊಳ್ಳುತ್ತಿದ್ದ ಯುವಕರಿಗೆ ಹಣ ಕೊಡುವುದಾಗಿ ನಂಬಿಸುತ್ತಿದ್ದ. ಕೆಲವರು ನೀನು ಜೈಲಿನಲ್ಲಿದ್ದು ಹೇಗೆ ಹಣ ಕೊಡುತ್ತಿಯಾ? ಎಂದು ಪ್ರಶ್ನಿಸಿದರೆ, 24 ಗಂಟೆಯೊಳಗೆ ಜೈಲಿನ ಅಧಿಕಾರಿ- ಸಿಬಂದಿ ಸಹಕಾರದಿಂದಲೇ ಹಣವನ್ನು ತರಿಸಿಕೊಂಡು ಕೊಡುತ್ತಿದ್ದ ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ
    ಆ ಬಳಿಕ ಆ ಯುವಕರು ಜೈಲಿನ ಹೊರಗಡೆ ಆತನ ಪರವಾಗಿ ಅಕ್ರಮ ಚಟುವಟಿಕೆ ನಡೆಸಿದರೆ 50,000 ರೂ.ನಿಂದ 1 ಲಕ್ಷ ರೂ. ವರೆಗೂ ಹಣ ನೀಡಿರುವ ಮಾಹಿತಿ ಇದೆ.
    ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ನಾಸೀರ್‌ನನ್ನು ಪರ ಪ್ಪನ ಅಗ್ರಹಾರ ಜೈಲಿನ ಹೈಸೆಕ್ಯೂರಿಟಿ ಜೈಲಿನಲ್ಲಿ ಇರಿಸಲಾಗಿದೆ. ಆದರೆ ಪ್ರತೀ ಶುಕ್ರವಾರ ಜೈಲಿನ ಒಂದು ಆವರಣದಲ್ಲಿ ಮುಸ್ಲಿಂ ಸಮುದಾಯದ ಸಜಾ ಬಂದಿ, ವಿಚಾ ರಣಾಧೀನ ಕೈದಿಗಳಿಗೆ ಒಟ್ಟಿಗೆ ವಿಶೇಷ ಪ್ರಾರ್ಥನೆಗೆ ಅವಕಾಶವಿದೆ.
    ಅದನ್ನು ದುರುಪಯೋಗ ಪಡಿಸಿಕೊಂಡಿರುವ ನಾಸೀರ್‌, ಕಳ್ಳತನ, ದರೋಡೆ, ಸುಲಿಗೆಯಂತಹ ಹಣಕಾಸಿನ ಪ್ರಕರಣಗಳಲ್ಲಿ ಜೈಲು ಸೇರಿರುವ ಯುವಕರನ್ನು ಪರಿಚಯಿಸಿಕೊಂಡು ಅವರ ಹಿನ್ನೆಲೆ ಹಾಗೂ ಆರ್ಥಿಕ ಪರಿಸ್ಥಿತಿ ತಿಳಿದುಕೊಳ್ಳುತ್ತಿದ್ದ ಎಂದು ಮೂಲಗಳು ತಿಳಿಸಿವೆ.
    ನಾಸೀರ್‌, ಜೈಲಿನ ಅಧಿಕಾರಿ-ಸಿಬ್ಬಂದಿಗೆ ಹಣದ ಆಮಿಷವೊಡ್ಡಿ, ತಾನು ಆಯ್ಕೆ ಮಾಡಿಕೊಂಡಿದ್ದ ಯುವಕರನ್ನು ತನ್ನ ಬ್ಯಾರಕ್‌ ಬಳಿ ಕರೆಸಿಕೊಳ್ಳುತ್ತಿದ್ದ. ಅನಂತರ ಅವರಿಗೆ ಎಲ್‌ಇಟಿ ಸಂಘಟನೆ ಬಗ್ಗೆ ಪ್ರಚೋದನೆ ನೀಡುತ್ತಿದ್ದ. ಅಲ್ಲದೆ ಜೈಲಿನಿಂದ ಬಿಡುಗಡೆ ಆಗಲು ಹಾಗೂ ಹೊರಗೆ ಹೋದ ಬಳಿಕ ಅವರಿಗೆ ತನ್ನ ಸಹಚರರ ಮೂಲಕ ಆರ್ಥಿಕವಾಗಿ ನೆರವಾಗಿದ್ದಾನೆ. ಹೀಗಾಗಿ ಸುಮಾರು ಆರೇಳು ವರ್ಷಗಳಲ್ಲಿ ಸುಮಾರು 20-30 ಮಂದಿ ಯುವಕರು ಸಂಘಟನೆ ಪರವಾಗಿ ಕೆಲಸ ಮಾಡಿದ್ದಾರೆ.
    ಈ ಎಲ್ಲರ ಮಾಹಿತಿಯನ್ನು ಸಂಗ್ರಹಿಸಿರುವ ಎನ್ಐಎ ಪೊಲೀಸರು ತನಿಖೆ ಶುರುಗೊಳಿಸಿದ್ದಾರೆ.

    ಉಗ್ರ ಎನ್ಐಎ ಕಳ್ಳತನ ಪೋಲಿಸ್ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಮನೆ ಮನೆಗೆ ಪೊಲೀಸ್
    Next Article ವಿಜಯೇಂದ್ರ ಅಜ್ಞಾನಿಯಂತೆ.
    vartha chakra
    • Website

    Related Posts

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025

    2 Comments

    1. LOKABET88 on July 18, 2025 1:08 pm

      In a world saturated with countless blogs, this one stands out as a delightful haven of engaging content and thoughtful insights. Offering a fresh perspective on a wide range of topics, the blog’s posts are always well-written and thought-provoking. With a user-friendly layout and consistent updates, this blog is an excellent resource for anyone seeking informative and entertaining reads. Highly recommended! Try to Visit My Web Site : LOKABET88

      Reply
    2. Connietaups on July 18, 2025 3:04 pm

      More articles like this would pretence of the blogosphere richer. https://gnolvade.com/es/fildena/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit on Modi ಯನ್ನು ಟೀಕಿಸಿದ ಈ George Soros ಯಾರು?
    • Leroyevorn on ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    • BurtonEroke on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe