ಬೆಂಗಳೂರು,ಮೇ 22-
ಗೃಹ ಸಚಿವ ಪರಮೇಶ್ವರ್ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಲಯದ ದಾಳಿ ಕುರಿತಂತೆ ಕೇಂದ್ರ ಮಂತ್ರಿ ಪ್ರಹ್ಲಾದ ಜೋಶಿ ಸ್ಪೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿರುವ ಬೆನ್ನೆಲ್ಲೇ ಪ್ರಹ್ಲಾದ ಜೋಶಿ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
ಪರಮೇಶ್ವರ್ ಅವರ ವಿರುದ್ಧ ನಡೆದಿರುವ ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ. ಪರಮೇಶ್ವರ್ ವಿರುದ್ಧ ಕಾಂಗ್ರೆಸ್ನ ಒಂದು ಗುಂಪು ಇಂಡಿಯಾಗೆ ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ
2013ರ ವಿಧಾನಸಭೆ ಚುನಾವಣೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? ಡಾ.ಜಿ.ಪರಮೇಶ್ವರ್ರನ್ನು ಇದೇ ಸಿದ್ದರಾಮಯ್ಯ ಸೋಲಿಸಿದ್ದರು. ಚಿನ್ನ ಕಳ್ಳತನ ಸೇರಿ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡುವಂತೆ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು ಯಾರು? ಎಂದು ಪ್ರಶ್ನಿಸಿದರು.
ನಮಗೆ ಪರಮೇಶ್ವರ್ ಮೇಲೆ ಗೌರವ ಇದೆ, ಸಭ್ಯ ರಾಜಕಾರಣಿ. ಏನಾಗಿದೆ ಅನ್ನೋದನ್ನು ಇಡಿ ಅಧಿಕಾರಿಗಳು ಹುಡುಕುತ್ತಿದ್ದಾರೆ.ಕಾಂಗ್ರೆಸ್ನ ಒಂದು ಗುಂಪು ಮಾಹಿತಿ ಕಳಿಸಿದ್ದಾರೆಂಬ ಆರೋಪವಿದೆ. ಯಾರು ಕಳುಹಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯಗೂ ಗೊತ್ತಿದೆ. ಮಾಹಿತಿ ಸಿಕ್ಕಾಗ ಇಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಆಗಲಿದೆ ಎಂದು ತಿಳಿಸಿದರು.
Previous Articleಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
Next Article ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

1 Comment
mgm betting app promo betmgm-play betmgm Nevada