Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    ಮಾಹಿತಿ

    ಪರಮೇಶ್ವರ್ ವಿರುದ್ಧ ED ಕೆಂಗಣ್ಣು

    vartha chakraBy vartha chakraMay 22, 202529 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.21:
    ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಇದೀಗ ಜಾರಿ ನಿರ್ದೇಶನಾಲಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
    ಅಕ್ರಮ ಹಣಕಾಸು ವಹಿವಾಟು ಆರೋಪದಲ್ಲಿ ಪರಮೇಶ್ವರ್ ಅವರ ಒಡೆತನದ ವಿದ್ಯಾಸಂಸ್ಥೆಗಳು ಮತ್ತು ಅವುಗಳ ಹಿರಿಯ ಸಿಬ್ಬಂದಿಯ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ 30ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಪ್ರತ್ಯೇಕವಾಗಿ ತುಮಕೂರಿನ ಹೆಗ್ಗೆರೆಯಲ್ಲಿರುವ ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ, ಮರಳೂರು ದಿಣ್ಣೆಯಲ್ಲಿರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಹೆಗ್ಗೆರೆಯಲ್ಲಿರುವ ಪರಮೇಶ್ವರ್ ಅವರ ಹುಟ್ಟೂರಿನ ಮನೆ, ತುಮಕೂರಿನ ಹೊರವಲಯದಲ್ಲಿರುವ ಹಳೆಯ ಎಚ್ಎಂಎಸ್ ಕಾಲೇಜು, ಮತ್ತು ನೆಲಮಂಗಲದ ಬಳಿಯಿರುವ ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.
    ದಾಳಿಯ ವೇಳೆ ಈ ಪ್ರದೇಶಗಳಲ್ಲಿ ಸಾರ್ವಜನಿಕ ಹೋರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಹಣಕಾಸು ವಹಿವಾಟಿಕೆ ಸಂಬಂಧಿಸಿದಂತೆ ಕೆಲವು ಲೆಕ್ಕಪತ್ರಗಳನ್ನು ಪರಿಶೀಲತೆ ವಶಕ್ಕೆ ಪಡೆದುಕೊಂಡಿದ್ದಾರೆ
    ಚಿನ್ನ ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿರುವ ರನ್ಯಾರಾವ್ ಪ್ರಕರಣ ಹಾಗೂ ಇತ್ತೀಚೆಗೆ ಪರಮೇಶ್ವರ ಅವರು ಖರೀದಿಸಿರುವ ಎಚ್‌ಎಂಎಸ್ ಎಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.
    ಇತ್ತೀಚೆಗೆ ಪರಮೇಶ್ವರ್ ಅವರು ತುಮಕೂರಿನ ಹೊರವಲಯದಲ್ಲಿರುವ ಎಚ್ ಎಂಎಸ್ ಇಂಜಿನಿಯರಿಂಗ್ ಕಾಲೇಜನ್ನು ಕಾಂಗ್ರೆಸ್ ಮಾಜಿ ಶಾಸಕ ಶಫಿ ಅಹಮ್ಮದ್ ಅವರಿಂದ ಖರೀದಿಸಿದ್ದರು. ಈ ವೇಳೆ ಭಾರಿ ಪ್ರಮಾಣದ ಹಣಕಾಸಿನ ವಹಿವಾಟು ನಡೆದಿತ್ತು ಎಂದು ತಿಳಿದುಬಂದಿದೆ.
    ಜೊತೆಗೆ ಮೈಸೂರಿನಲ್ಲಿ ಅಂತರಾಷ್ಟ್ರೀಯ ವಸತಿ ಶಾಲೆಯೊಂದನ್ನು ಪರಮೇಶ್ವರ್ ಆರಂಭಿಸಿದ್ದರು. ಜೊತೆಗೆ ಕೆಲವರು ಆಸ್ತಿಗಳ ವಹಿವಾಟುಗಳು ನಡೆದಿರುವ ಮಾಹಿತಿಗಳಿವೆ
    ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಇಂಜಿನಿಯರಿಂಗ್ ಕಾಲೇಜಿಗೆ ದೇಶದ ವಿವಿಧ ರಾಜ್ಯಗಳಿಂದಷ್ಟೇ ಅಲ್ಲದೆ ವಿದೇಶಿ ವಿದ್ಯಾರ್ಥಿಗಳು ಕೂಡ ಪ್ರವೇಶ ಪಡೆಯುವುದು ಸಾಮಾನ್ಯ. ಈ ಸಂದರ್ಭದಲ್ಲಿ ಬೇರೆಬೇರೆ ಸ್ವರೂಪಗಳಲ್ಲಿ ಹಣಕಾಸಿನ ವಹಿವಾಟುಗಳು ನಡೆಯುತ್ತವೆ. ಅದರಲ್ಲಿ ಕೆಲವು ಪಿಎಂಎಲ್‌ಎ ಕಾಯ್ದೆಗೆ ವ್ಯಾಪ್ತಿಗೊಳಪಡಲಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ತಿಳಿದುಬಂದಿದೆ.
    ರಾಜಕೀಯ ಪ್ರೇರಿತ:
    ಇನ್ನು ತಮ್ಮ ಒಡೆತನದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿಯ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಪರಮೇಶ್ವರ್ ನಿರಾಕರಿಸಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಮೇಶ್ವರ ಅವರು ಪ್ರಾಮಾಣಿಕ ಮತ್ತು ಸಜ್ಜನ ರಾಜಕಾರಣಿ. ಅವರು ಯಾವುದೇ ರೀತಿಯ ತಪ್ಪು ಮಾಡಿಲ್ಲ ಎನ್ನುವುದು ನನ್ನ ಬಲವಾದ ನಂಬಿಕೆ ಅವರ ಸಂಸ್ಥೆಯಲ್ಲಿ ಬೇರೆ ಯಾರೋ ಮಾಡಿರುವ ವಹಿವಾಟಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ತಿಳಿಸಿದರು.
    ಅಕ್ರಮದ ಕಾರಣಕ್ಕೆ ದಾಳಿ:
    ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ
    ಜಾರಿ ನಿರ್ದೇಶನಾಲಯ, ಸಿಬಿಐ ಸ್ವಾಯತ್ತ ಸಂಸ್ಥೆಗಳು. ಅವು ತಮ್ಮ ಕೆಲಸ ತಾವು ಮಾಡುತ್ತಿರುತ್ತವೆ. ಅವು ನಡೆಸುವ ದಾಳಿಗಳು ರಾಜಕೀಯ ಪ್ರೇರಿತ ಎನ್ನಲಾಗದು’ ಎಂದು ಹೇಳಿದರು.
    ಇ.ಡಿ., ಸಿಬಿಐ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಸ್ಥಾಪಿಸಿದ ಸಂಸ್ಥೆಗಳು.ಆದಾಯ ಮೀರಿ ಆಸ್ತಿಯಿದ್ದರೆ ಅವು ಪರಿಶೀಲಿಸುತ್ತವೆ. ಅವು ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಅಂಥ ನೋಡಲ್ಲ. ಅಲ್ಲಿ ಅಂಥದ್ದು ಏನೂ ಸಿಗದಿದ್ದರೆ ಮುಗಿಯಿತು. ಭಯ ಯಾಕೆ’ ಎಂದು ಪ್ರಶ್ನಿಸಿದರು.
    ಅವು ಕೆಲಸ ಮಾಡದಿದ್ದರೆ ತಪ್ಪು. ಅದನ್ನು ಪ್ರಶ್ನಿಸಬೇಕು. ಆದರೆ, ದಾಳಿ ನಡೆಸಿದಾಗ ಪ್ರಶ್ನಿಸಿದರೆ ಹೇಗೆ? ಅವುಗಳಿಂದ ತೊಂದರೆ ಆಗುತ್ತಿದ್ದರೆ, ಅವುಗಳನ್ನು ತೆಗೆದುಹಾಕುವಂತೆ ಕಾಂಗ್ರೆಸ್ ಪತ್ರ ಬರೆಯಲಿ’ ಎಂದು ಸವಾಲು ಹಾಕಿದರು.

    ED ಕಾಂಗ್ರೆಸ್ ಕಾಲೇಜು ಚಿನ್ನ ಜೆಡಿಎಸ್ ಬಿಜೆಪಿ Bengaluru ಮೈ ರಾಜಕೀಯ ವಿದ್ಯಾ ವಿದ್ಯಾರ್ಥಿ ಶಾಲೆ ಶಿಕ್ಷಣ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ
    Next Article ಡಾ.ಸಲೀಂ ರಾಜ್ಯ ಪೊಲೀಸ್ ನೂತನ ಸಾರಥಿ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokodaePl on JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    • vivodzapojkrasnodarvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • сайт Мани Икс on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe