ಬೆಂಗಳೂರು.ಏ.30:
ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪದಲ್ಲಿ ಯುವಕನೊಬ್ಬನನ್ನು ಗುಂಪೊಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ ಘಟನೆ ಮಂಗಳೂರಿನ ಕುಡುಪು ಗ್ರಾಮದಲ್ಲಿ ನಡೆದಿದೆ.
ಹತ್ಯೆಗೀಡಾಗಿರುವ ವ್ಯಕ್ತಿಯನ್ನು ಕೇರಳದ ವಯನಾಡು ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.
ಈತ ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದವನು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 27ರಂದು ಸಂಜೆ ಸುಮಾರು 5.30 ಗಂಟೆಗೆ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು. ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹದಲ್ಲಿ ಗಂಭೀರ ಗಾಯಗಳು ಕಂಡುಬಂದಿರಲಿಲ್ಲ. ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದೆವು.
ಈ ಬಗ್ಗೆ ತನಿಖೆ ನಡೆಸಿದಾಗ ಮೈದಾನದಲ್ಲಿ ಸ್ಥಳೀಯರು ಕ್ರಿಕೆಟ್ ಆಡುತ್ತಿದ್ದರು ಈ ವೇಳೆ ಅಲ್ಲಿಗೆ ಹೋದ ಯುವಕ ಪಾಕಿಸ್ತಾನ ಪರವಾದ ಘೋಷಣೆ ಕೂಗಿದ್ದಾನೆ ಇದರಿಂದ ತೆರಳಿದ ಸ್ಥಳೀಯ ಯುವಕರು ಆತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ಆತನ ಮೇಲೆ ಕೈಯಿಂದ ಹೊಡೆದು, ಕಾಲಿನಿಂದ ಒದ್ದು, ಕಟ್ಟಿಗೆಯಿಂದ ಹೊಡೆದು ಹಲ್ಲೆ ನಡೆಸಿದ್ದರು. ಸ್ಥಳದಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಕೇಳದೇ ಹಲ್ಲೆ ನಡೆಸಿದ್ದರು. ಆತ ಸ್ಥಳದಲ್ಲೇ
ಕೊನೆಯುಸಿರೆಳೆದಿದ್ದ’ ಎಂದರು.
ಅಶ್ರಫ್ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದ್ದು, ಆಂತರಿಕ ರಕ್ತಸ್ರಾವ ಮತ್ತು ಆಘಾತಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಅಧಿಕಾರಿಗಳು ಅವರ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಅವರು ಅಧಿಕೃತ ಗುರುತಿಸುವಿಕೆಗಾಗಿ ಮತ್ತು ಕಾನೂನು ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಶೀಘ್ರದಲ್ಲೇ ಮಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 15 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
Previous Articleವಕೀಲ್ ಸಾಬ್ ಜೈಲಿಂದ ಬಿಡುಗಡೆ
Next Article ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!