ಬೆಂಗಳೂರು,ಜ.16-
ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅತ್ಯಂತ ವೇಗವಾಗಿ ಬೆಂಗಳೂರಿಗೆ ಬರುತ್ತಿತ್ತು ಈ ವೇಳೆ ಮತ್ತೊಂದು ಕಾರನ್ನು ಓವರ್ ಟೇಕ್ ಮಾಡಲು ಯತ್ನಿಸಿದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಪಾದಯಾತ್ರೆಯಲ್ಲಿ ತೆರಳುತ್ತಿದ್ದವರಿಗೆ ಅಪ್ಪಳಿಸಿದೆ.
ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ ಶಕ್ತಿ ಮಾಲಾಧಾರಿಗಳು ಸಾಗುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತದೆ
ಶಾಸಕ ವಿರೇಂದ್ರ ಪಪ್ಪಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಗಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ