ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಸಮಾವೇಶಗೊಂಡ ಮಹಿಳಾ ಕಾರ್ಯಕರ್ತೆಯರು, ಅಡುಗೆ ಅನಿಲ,ರುಬ್ಬುವ ಕಲ್ಲು ಮತ್ತು ಒನಕೆ ಹಿಡಿದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು.
ದಿನ ಬಳಕೆಯ ವಸ್ತುಗಳಾದ ಅಡುಗೆ ಅನಿಲ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್, ಔಷಧಿಗಳು ಇನ್ನಿತರ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ದಿನಗೂಲಿ ಅವಲಂಬಿಸಿ ಬದುಕು ನಡೆಸುತ್ತಿರುವ ಬಡಜನರು ಕುಟುಂಬ ನಿರ್ವಹಣೆಗೆ ಪರಿತಪಿಸುವಂತಾಗಿದೆ. ಜನರ ಹಿತರಕ್ಷಣೆ ಮಾಡಬೇಕಾದ ಸರ್ಕಾರಗಳು ಜವಾಬ್ದಾರಿ ಮರೆತಿವೆ ಎಂದು ಸಂಘಟನೆಯ ಮುಖಂಡರು ದೂರಿದರು.