ಬೆಂಗಳೂರು:
ಖ್ಯಾತ ನಾಮರ ಹುಟ್ಟುಹಬ್ಬ, ರಾಷ್ಟ್ರೀಯ ದಿನಗಳು ಹಾಗೂ ಹಬ್ಬ ಹರಿದಿನಗಳು ಬಂತೆಂದರೆ ಸಾಕು ಉದ್ಯಾನಗರಿ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಫ್ಲೆಕ್ಸ್ ಗಳು ಜಾಹಿರಾತು ಫಲಕಗಳು ಶುಭಾಶಯ ಕೋರುವ ಪೋಸ್ಟರ್ ಗಳನ್ನು ಅಂಟಿಸುತ್ತಾರೆ.
ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ನೀಡುವ ಸೂಚನೆಗಳಿಗೆ ಇವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನೇ ನೀಡುವುದಿಲ್ಲ. ಹೀಗಾಗಿ ಹಬ್ಬ ಹರಿದಿನ ಮುಗಿದ ನಂತರ ಪಾಲಿಕೆಯ ಸಿಬ್ಬಂದಿ ಅವುಗಳನ್ನು ತೆರವುಗೊಳಿಸುತ್ತಾರೆ.
ಇದು ಒಂದು ಕಡೆಯಾದರೆ ನಗರದ ಅನೇಕ ಪ್ರದೇಶಗಳಲ್ಲಿ ಸಾವಿರಾರು ಗಟ್ಟಲೆ ಅನಧಿಕೃತ ಜಾಹೀರಾತು ಫಲಕಗಳನ್ನು ಅಳವಡಿಸಲಾಗಿದೆ ಈ ಬಗ್ಗೆ ವ್ಯಾಪಕ ದೂರುಗಳನ್ನು ಆಲಿಸಿದ ಬೆಂಗಳೂರು ನಗರದ ಉಸ್ತುವಾರಿಯಾಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದರ ವಿರುದ್ಧ ಸಮರ ಸಾರವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಅವರಿಂದ ಸೂಚನೆ ಹೊರಬೀಳುತ್ತಿದ್ದಂತೆ ಅಖಾಡಕ್ಕಿಳಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಿಬಿಎಂಪಿವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್‌ಐಆರ್ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿರುವ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಪಾಲಿಕೆಯ ಎಲ್ಲಾ 8 ವಲಯಗಳಲ್ಲೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ಗುರುತಿಸಿ ಕೂಡಲೆ ಅದನ್ನು ತೆರವುಗೊಳಿಸಬೇಕು. ಜೊತೆಗೆ ಅನಧಿಕೃತ ಜಾಹೀರಾತು ಅಳವಡಿಸಿರುವವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಆದೇಶಿಸಿದ್ದಾರೆ
Previous Articleಸಾಲ ವಾಪಸ್ ಕೇಳಿದರೆ ಮೂರು ವರ್ಷ ಜೈಲು
Next Article ಜಾತಿ ನಿಂದನೆ ಆರೋಪದಲ್ಲಿ ಕ್ರಿಸ್ ಗೋಪಾಲಕೃಷ್ಣನ್


1 Comment
Нужен трафик и лиды? веб студия avigroup в казани SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.