ಬೆಂಗಳೂರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ಚರ್ಚೆ ಜೋರಾಗಿ ನಡೆದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಲದ ಬಜೆಟ್ ಅಧಿವೇಶನದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಒಂದು ವರ್ಗ ಹೇಳಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ತಮ್ಮ ಅಧಿಕಾರಾವಧಿ ಪೂರ್ಣಗೊಳಿಸಲಿದ್ದಾರೆ ಎಂದು ಅವರ ಆಪ್ತರು ಹೇಳುತ್ತಿದ್ದಾರೆ.
ಈ ಚರ್ಚೆಯ ನಡುವೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುವುದಿಲ್ಲ ಆದರೆ ಕೇಂದ್ರದಲ್ಲಿ ಮಾತ್ರ ನಾಯಕತ್ವ ಬದಲಾವಣೆಯಾಗುತ್ತದೆ ಕಾದು ನೋಡಿ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯ ಬಗ್ಗೆ ಬಿಜೆಪಿಯು ಸೇರಿದಂತೆ ಅನೇಕ ಪಕ್ಷಗಳಲ್ಲಿ ಸಮಾಧಾನ ಇಲ್ಲ ಹೀಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು
ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು’ ಎಂದರು.
ತೆಲುಗುದೇಶಂ ನಾಯಕ ಚಂದ್ರ ಬಾಬು ನಾಯ್ಡು ಸೇರಿದಂತೆ ಹಲವರು ಪ್ರಧಾನಿ ಹುದ್ದೆಗೇರುವ ರೇಸ್ ನಲ್ಲಿ ಇದ್ದಾರೆ ’11 ವರ್ಷ ವಿಶ್ವಗುರು ನೋಡಿದ್ದೇವೆ. ಅವರನ್ನು ಕೆಳಗಿಳಿಸಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಿದರೂ ನಮ್ಮ ಅಭ್ಯಂತರವಿಲ್ಲ’ ಎಂದೂ ಹೇಳಿದರು.
Previous Articleನೀರಲ್ಲಿ ತೇಲುತ್ತಿದ್ದ ಯೋಗ ಪಟುಗೆ ಏನಾಯ್ತು ಗೊತ್ತಾ
Next Article School ಬಳಿ Bar ಇದ್ದರೆ ಹೀಗೆ ಮಾಡಿ