Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ.
    Trending

    ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ.

    vartha chakraBy vartha chakraJune 10, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು, ಜೂ.10:
    ಪ್ರಾಣಿಪ್ರಿಯರ ನೆಚ್ಚಿನ ತಾಣ,ಮಕ್ಕಳ‌ ಕುತೂಹಲದ ಕೇಂದ್ರವಾಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನದ ಆಕರ್ಷಣೆಗೆ ಮತ್ತೊಂದು ಸೇರ್ಪಡೆಯಾಗಲಿದೆ. ಉದ್ಯಾನವನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ  ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿರತೆ ಸಫಾರಿ ಜೂನ್ ಮಾಸಾಂತ್ಯದೊಳಗೆ ಆರಂಭವಾಗಲಿದೆ.
    ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.
    ಮೈಸೂರು ಶ್ರೀ ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.
    ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು.
    ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.
    ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ,  ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.
    ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.
    ಇತರ ನಿರ್ಣಯಗಳು:
    • ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.
    • ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.
    • ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.
    • ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.

    Verbattle
    Verbattle
    Verbattle
    education Government Karnataka Trending Varthachakra ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ವಿನೋದ್ ತಾವ್ಡೆ ನೇಮಕ ಸಾಧ್ಯತೆ.
    Next Article ಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Nhoyya on February 11, 2026 5:27 pm

      bet mgm $200 online casino betmgm play betmgm Connecticut

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Tracymix on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Tracymix on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.