Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ
    ವಿಶೇಷ ಸುದ್ದಿ

    ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ

    vartha chakraBy vartha chakraJanuary 9, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.9:
    ಗಣಿನಾಡು ಬಳ್ಳಾರಿ ಜೀನ್ಸ್ ಗೆ ದೊಡ್ಡ ಪ್ರಮಾಣದಲ್ಲಿ ಹೆಸರು ಮಾಡಿದೆ ಈ ಹಿನ್ನೆಲೆಯಲ್ಲಿ ಜೀನ್ಸ್ ಉದ್ಯಮವನ್ನು ಉತ್ತೇಜಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಬಳ್ಳಾರಿಯಲ್ಲಿ ಜೀನ್ ಪಾರ್ಕ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ
    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಬಳ್ಳಾರಿಗೆ ಭೇಟಿ ನೀಡಿ ಕೊಟ್ಟಿದ್ದ ಭರವಸೆಯಂತೆ
    ಇಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಮಂತ್ರಿ ಎಂಬಿ ಪಾಟೀಲ್ ಹೇಳಿದ್ದಾರೆ
    ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದ್ದು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ
    ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟಾದ ಮೇಲೆ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ ಉದ್ಯಮ ನೆಲ ಕಚ್ಚಿದೆ. ಹೂಡಿಕೆದಾರರು ಮತ್ತು ರಫ್ತುದಾರರ ಗಮನ ಈಗ ಬಳ್ಳಾರಿಯಲ್ಲಿನ ಜೀನ್ಸ್ ತಯಾರಿಕೆ ಉದ್ಯಮದ ಮೇಲೆ ಹರಿದಿದೆ. ಇದನ್ನು ನಾವು ಸದವಕಾಶವಾಗಿ ಪರಿವರ್ತಿಸಿಕೊಂಡು, ಹೂಡಿಕೆಯನ್ನು ಆಕರ್ಷಿಸಲಿದ್ದೇವೆ’ ಎಂದಿದ್ದಾರೆ.
    ಬಳ್ಳಾರಿಯಲ್ಲಿ 500ಕ್ಕಿಂತಲೂ ಹೆಚ್ಚು ಜೀನ್ಸ್ ಉಡುಪು ತಯಾರಿಕೆ ಘಟಕಗಳಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹತ್ತಾರು ಸಾವಿರ ಉದ್ಯೋಗಗಳನ್ನು ಸೃಷ್ಟಿಸಿವೆ. ಇದಕ್ಕೆ ವ್ಯವಸ್ಥಿತ ರೂಪ ಕೊಟ್ಟು, ಇದನ್ನು ರಫ್ತು ಕೇಂದ್ರಿತವಾಗಿಯೂ ಬೆಳೆಸಬೇಕು ಎನ್ನುವುದು ಕೈಗಾರಿಕಾ ಇಲಾಖೆಯ ಚಿಂತನೆಯಾಗಿದೆ. ಇದಕ್ಕಾಗಿ ಜವಳಿ ಇಲಾಖೆಯ ಸಹಾಯವನ್ನೂ ಪಡೆಯಲಾಗುವುದು. ಆ ಇಲಾಖೆಯಲ್ಲಿ ಜೀನ್ಸ್ ತಯಾರಿಕೆ ಘಟಕಗಳಿಗೆ ರಿಯಾಯಿತಿ ಕೊಡುವ ವ್ಯವಸ್ಥೆ ಇದ್ದರೆ ಅದನ್ನೂ ಕೊಡಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಜವಳಿ ಸಚಿವರ ಜತೆಗೂ ಸಭೆ ನಡೆಸಲಾಗುವುದು ಎಂದು ಅವರು ವಿವರಿಸಿದ್ದಾರೆ.
    ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು. ಇದಾದ ಮೇಲೆ, 2023ರ ಆಗಸ್ಟ್ 1ರಂದು ನಮ್ಮ ಇಲಾಖೆಗೆ ಪತ್ರ ಬರೆದು, ಈ ಬಗ್ಗೆ ಗಮನ ಸೆಳೆದಿದ್ದರು. ಈ ಯೋಜನೆಯ ಅನುಷ್ಠಾನಕ್ಕೆ ಈಗ ಕಾಲ ಪ್ರಶಸ್ತವಾಗಿದ್ದು, ಅಂತಾರಾಷ್ಟ್ರೀಯ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಹೇಳಿದ್ದಾರೆ
    ಮುಖ್ಯಮಂತ್ರಿ ಸಿದ್ಧರಾಮಯ್ಯ ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲೂ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಈಗ ಅಸಂಘಟಿತವಾಗಿರುವ ಜೀನ್ಸ್ ಉದ್ಯಮಕ್ಕೆ ಸಂಘಟಿತ ರೂಪ ಕೊಟ್ಟು, ಇದನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವುದು ಇದರ ಹಿಂದಿನ ಉದ್ದೇಶವಾಗಿದೆ‌ ಎಂದಿದ್ದಾರೆ.
    ಬಳ್ಳಾರಿ ಜೀನ್ಸ್ ಪಾರ್ಕ್ ನಿಂದ ಪ್ರಾದೇಶಿಕ ಆರ್ಥಿಕತೆಗೆ ಚೈತನ್ಯ ಬರಲಿದೆ. ಜತೆಗೆ ನಾವೀನ್ಯತೆ ಮತ್ತು ಉಡುಪು ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳಿಗೆ ಆದ್ಯತೆ ಸಿಗಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದ್ದಾರೆ.
    ಬಳ್ಳಾರಿ ಸುತ್ತಮುತ್ತ ಈಗಾಗಲೇ ಸಕ್ರಿಯವಾಗಿರುವ ಜೀನ್ಸ್ ಉಡುಪು ತಯಾರಿಕೆ ಘಟಕಗಳಿಗೂ ಹೆಚ್ಚಿನ ನೆರವು ನೀಡಲಾಗುವುದು. ಜೀನ್ಸ್ ಉಡುಪುಗಳು ಯುವಜನಾಂಗಕ್ಕೆ ಅಚ್ಚುಮೆಚ್ಚಿನದಾಗಿವೆ. ಇಲ್ಲಿರುವ ಮಾರುಕಟ್ಟೆಯನ್ನು ನಾವು ಗುರಿಯಾಗಿಟ್ಟುಕೊಂಡು, ದಾಪುಗಾಲಿಡಲಿದ್ದೇವೆ. ರಾಜ್ಯದ ಉದ್ಯಮಸ್ನೇಹಿ ಕೈಗಾರಿಕಾ ನೀತಿಯು ಇದಕ್ಕೆ ಮತ್ತಷ್ಟು ಇಂಬು ಕೊಡಲಿದೆ ಎಂದು ಸಚಿವರು ಹೇಳಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ Bengaluru ರಾಜಕೀಯ ರಾಹುಲ್ ಗಾಂಧಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿಯಲ್ಲಿ ಕಾಲ್ತುಳಿತಕ್ಕೆ ಇದೇ ಕಾರಣ
    Next Article ಬಿಜೆಪಿಯಲ್ಲೂ ಡಿನ್ನರ್ ಪಾಲಿಟಿಕ್ಸ್.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Mpfsho on February 11, 2026 1:36 pm

      betmgm Maine https://betmgm-play.com/ bet mgm grand

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನಾಲ್ವರಿಗೆ ಒಲಿದ ಅದೃಷ್ಟ !
    • Nwgbuv on ಗುಂಡು ಹಾರಿಸಿದ ಒರ್ವ ಕಳ್ಳ ಸಿಕ್ಕಿ‌ಬಿದ್ದ | Bangalore News
    • Pilxuw on ಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.