ಬೆಂಗಳೂರು,ಜು.10:
ರಾಜ್ಯದ ಆಡಳಿತರೂಢ ಕಾಂಗ್ರೆಸ್ಸಿನ ಸಿರಿವಂತ ಶಾಸಕ ಎಂದು ಗುರುತಿಸಲ್ಪಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿಯ ಬಿಸಿ ಮುಟ್ಟಿಸಿದ್ದಾರೆ
ಬೆಂಗಳೂರು ಸೇರಿದಂತೆ ಶಾಸಕ ಸುಬ್ಬಾರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ ನಡೆಸಲಾಗಿದೆ. ವಿದೇಶಗಳಲ್ಲಿನ ಬ್ಯಾಂಕ್ ಖಾತೆಗಳು, ವಿದೇಶಿ ವಹಿವಾಟುಗಳಲ್ಲಿನ ಹೂಡಿಕೆಗಳು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಶಾಸಕ ಸುಬ್ಬಾರೆಡ್ಡಿ ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಸಂಬಂಧ ದಾಳಿ ನಡೆದಿದೆ. ವಿದೇಶಗಳಲ್ಲಿನ ಬ್ಯಾಂಕ್ ಅಕೌಂಟ್, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ. ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ.
ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿರುವ ಇವರ ಘೋಷಿತ ಆಸ್ತಿ 300 ಕೋಟಿಗೂ ಅಧಿಕ ಎಂದು ಹೇಳಲಾಗಿದೆ ವಿಧಾನಸಭೆ ಚುನಾವಣೆಗೂ ಬಾಗೇಪಲ್ಲಿ ಕ್ಷೇತ್ರದ ಹಲವೆಡೆ ಇವರು ನಡೆಸಿದ ಉಚಿತ ಕೊಡುಗೆಗಳ ಶಿಬಿರ ರಾಜ್ಯಾದ್ಯಂತ ಗಮನ ಸೆಳೆದಿದ್ದವು.
Previous Articleಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !
Next Article ಬೆಂಗಳೂರು ಮಹಿಳೆಯರೇ ಹುಷಾರ್..