ಬೆಂಗಳೂರು: ಬಾಡಿಗೆಗಿದ್ದ ಯುವತಿಯನ್ನು ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ತಲೆಗೆ ಪಿಸ್ತೂಲಿಟ್ಟು ಬೆದರಿಕೆಯೊಡ್ಡಿದ್ದ ಮನೆ ಮಾಲೀಕನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ಅನಿಲ್ ರವಿಶಂಕರ್ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಟೈಲ್ಸ್ ಬ್ಯುಸಿನೆಸ್ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಿದ್ದಾನೆ. ಈತನನ್ನು ಪೊಲೀಸರು 3 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.