Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಯಿ ಬಿಟ್ಟರೆ ಬಾಲ ಕತ್ತರಿಸುತ್ತೇವೆ
    ರಾಜಕೀಯ

    ಬಾಯಿ ಬಿಟ್ಟರೆ ಬಾಲ ಕತ್ತರಿಸುತ್ತೇವೆ

    vartha chakraBy vartha chakraAugust 2, 202329 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಆ,2- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಟ 20ರಿಂದ 25 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ರಾಜ್ಯನಾಯಕರಿಗೆ ನೀಡಿರುವ ಹೈಕಮಾಂಡ್,ಪಕ್ಷ ಹಾಗೂ ಸರ್ಕಾರದ ವಿದ್ಯಮಾನಗಳ ಬಗ್ಗೆ ಬಹಿರಂಗ ಹೇಳಿಕೆ ನೀಡುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಹೈಕಮಾಂಡ್ ನಾಯಕರು ರಾಜ್ಯ ಕಾಂಗ್ರೆಸ್ ನ ಪ್ರಮುಖ ನಾಯಕರು, ಮುಖ್ಯಮಂತ್ರಿ ಹಾಗೂ ಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದರು.
    ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಅಸಮಧಾನ ಇದರ ಬೆನ್ನಲ್ಲೇ ಸರ್ಕಾರಿ ನೌಕರರ ವರ್ಗಾವಣೆ ಹಾಗೂ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಕುರಿತು ಕೇಳಿಬಂದ ಶಾಸಕರ ಅಸಮಧಾನದ ಹಿನ್ನೆಲೆಯಲ್ಲಿ ಈ ಸಭೆ ಆಯೋಜಿಸಲಾಗಿತ್ತು.

    ಇದರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ನಾಯಕರಾದ ರಾಹುಲ್ ಗಾಂಧಿ,ಪ್ರಿಯಾಂಕಾ ಗಾಂಧಿ, ವೇಣುಗೋಪಾಲ್,ಸುರ್ಜೇವಾಲಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
    ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ಈವರೆಗಿನ ರಾಜಕಾರಣದಲ್ಲಿ ಕಾಂಗ್ರೆಸ್ ಅತೀ ದೊಡ್ಡ ರಾಜ್ಯಗಳ ಪೈಕಿ ರಾಜಸ್ಥಾನ ಮತ್ತು ಕರ್ನಾಟಕಗಳಲ್ಲಿ ಆಡಳಿತದಲ್ಲಿದೆ. ರಾಜಸ್ಥಾನ ಅಧಿಕಾರಾವಧಿ ಮುಗಿಯುತ್ತಿದ್ದು, ಕರ್ನಾಟಕದ ಆಡಳಿತ ಪರ್ವ ಈಗಷ್ಟೇ ಶುರುವಾಗಿದೆ.
    ಕರ್ನಾಟಕದ ಗ್ಯಾರಂಟಿ ಯೋಜನೆಗಳು ದೇಶದಲ್ಲೇ ಸಂಚಲನ ಮೂಡಿಸಿವೆ. ಇಲ್ಲಿನ ಮಾದರಿ ಆಡಳಿತ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಬೇಕು. ಈ ನಿಟ್ಟಿನಲ್ಲಿ ಪಾರದರ್ಶಕ, ಭ್ರಷ್ಟಾಚಾರ ರಹಿತ, ಜನಪರ ಆಡಳಿತ ನೀಡುವಂತೆ ತಾಕೀತು ಮಾಡಿದರು.
    ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಂತ್ರಿಗಳು ಆಂತರಿಕ ಭಿನ್ನಮತಗಳನ್ನು ಕಾಲಕಾಲಕ್ಕೆ ಸರಿದೂಗಿಸಿ ಒಗ್ಗಟ್ಟು ಕಾಯ್ದುಕೊಳ್ಳಬೇಕು ಎಲ್ಲಾ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅಧಿಕಾರ ಹಂಚಿಕೆ ಅಥವಾ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಬಹಿರಂಗ ಚರ್ಚೆಗಳಾಗಬಾರದು. ಯಾವುದೇ ಅಸಮಾಧಾನಗಳಿದ್ದರೂ ಸಚಿವ ಸಂಪುಟ ಸಭೆ ಶಾಸಕಾಂಗ ಸಭೆ ಮತ್ತು ಪಕ್ಷದ ವೇದಿಕೆಯಲ್ಲೇ ಪ್ರಸ್ತಾಪಗೊಳ್ಳಬೇಕು.ಈ ವಿಷಯಗಳ ಬಗ್ಗೆ ಬಹಿರಂಗ ಚರ್ಚೆ ಮೂಲಕ ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಮುಖರಿಗೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ಬಗ್ಗೆ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಬೇಕು. ಕೋಮು ರಾಜಕಾರಣವನ್ನು ಯಾವುದೇ ಮುಲಾಜಿಲ್ಲದೇ ಹತ್ತಿಕ್ಕಬೇಕು. ಹೊಂದಾಣಿಕೆ ರಾಜಕಾರಣಕ್ಕೆ ಅವಕಾಶ ನೀಡಬಾರದು ಎಂದು ಸಲಹೆ ಮಾಡಿದರು ಎನ್ನಲಾಗಿದೆ.

    ಹೈಕಮಾಂಡ್ ಅಂತಿಮ:
    ಲೋಕಸಭೆ ಚುನಾವಣೆಯಲ್ಲಿ ಸಚಿವರನ್ನು ಕಣಕ್ಕಿಳಿಸಲು ಹೈಕಮಾಂಡ್ ನಿರ್ಧರಿಸಿದರೆ ಅದನ್ನು ಚಾಚೂ ತಪ್ಪದೇ ಪಾಲಿಸಬೇಕು. ಪಕ್ಷದ ಅಭ್ಯರ್ಥಿಯಾಗಿ ಯಾರೇ ಸ್ಪರ್ಧೆ ಮಾಡಿದರೂ
    ಪ್ರಾಮಾಣಕವಾಗಿ ಚುನಾವಣೆ ನಡೆಸಿ ಗೆಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
    ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕೆಲವು ಸಚಿವರನ್ನು ಕಣಕ್ಕಿಳಿಸಲಾಗಿತ್ತು. ಆ ಸಂದರ್ಭದಲ್ಲಿ ಗೆಲ್ಲುವ ಅವಕಾಶಗಳಿದ್ದರೂ ಸಂಪುಟದಿಂದ ಹೊರಗುಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಕೆಲವರು ಉದ್ದೇಶಪೂರ್ವಕವಾಗಿ ಸೋಲು ಕಂಡಿದ್ದರು ಎಂಬ ಆರೋಪವಿದೆ. ಈ ಬಾರಿ ಅಂತಹ ಬೆಳವಣಿಗೆಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ.

    ಮೈತ್ರಿ ಬೇಡ:
    ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇತರೆ ನಾಯಕರು
    ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಮಟ್ಟಿಗೆ ಯಾವುದೇ ಪಕ್ಷಗಳ ಜೊತೆ ಹೊಂದಾಣಿಕೆ ಬೇಡ ಎಂದು ಮನವಿ ಮಾಡಿದರು ಎನ್ನಲಾಗಿದೆ.
    ಸದ್ಯದ ಪರಿಸ್ಥಿತಿಯಲ್ಲಿ ಬಈ ಬಾರಿ ಚುನಾವಣೆಯಲ್ಲಿ 18 ರಿಂದ 20 ಸ್ಥಾನಗಳನ್ನು ಗೆಲ್ಲಲು ಅವಕಾಶವಿದೆ. ಕಳೆದ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದಾಗಿ ಕಾಂಗ್ರೆಸ್‍ಗೆ ಭಾರೀ ಹಿನ್ನಡೆಯುಂಟಾಗಿತ್ತು. ಈ ಬಾರಿ ಅಂತಹ ಯಾವುದೇ ಮೈತ್ರಿಗಳ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು ಎಂದು ಗೊತ್ತಾಗಿದೆ
    ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಾತ್ರ ಪ್ರಬಲ ಪಕ್ಷಗಳಾಗಿದ್ದು, ಪರಸ್ಪರ ಸ್ಪರ್ಧೆಯಿಂದಾಗಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗಿದೆ. ಹೀಗಾಗಿ ಯಾವುದೇ ರಾಜಕೀಯ ಪಕ್ಷದೊಂದಿಗೆ ಕರ್ನಾಟಕದ ಮಟ್ಟಿಗೆ ಮೈತ್ರಿ ಮಾಡಿಕೊಳ್ಳಬಾರದೆಂದು ರಾಜ್ಯದ ಪ್ರಮುಖ ನಾಯಕರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ

    Verbattle
    Verbattle
    Verbattle
    AICC Karnataka lok sabha 2024 lok sabha elections ಕಾಂಗ್ರೆಸ್ Election ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುತ್ತಪ್ಪ ರೈ ಪುತ್ರನ ವಿರುದ್ಧ ಎಫ್.ಐ.ಆರ್ | Muthappa Rai
    Next Article ಗ್ರನೇಡ್ ಬಳಕೆ ಗೊತ್ತಿಲ್ಲದ ಶಂಕಿತ ಉಗ್ರರು | Grenade
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • JamesBency on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.