Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಶಿಸ್ತಿಗೆ ಮದ್ದು ಅರೆಯಿತಾ ಕೋರ್ ಕಮಿಟಿ.
    ರಾಜಕೀಯ

    ಬಿಜೆಪಿ ಅಶಿಸ್ತಿಗೆ ಮದ್ದು ಅರೆಯಿತಾ ಕೋರ್ ಕಮಿಟಿ.

    vartha chakraBy vartha chakraDecember 7, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.7:
    ರಾಜ್ಯ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್‌‍ ಅಗರವಾಲ್‌ ಯಾವುದೇ ನಾಯಕರು ಪಕ್ಷದ ಚೌಕಟ್ಟು ಮೀರಿ ವರ್ತಿಸದಂತೆ ತಾಕೀತು ಮಾಡಿದ್ದಾರೆ.
    ರಾಜ್ಯ ಸರ್ಕಾರದ ವಿರುದ್ಧ ಹೋರಾಟ, ಸಂಘಟನೆ ಎಲ್ಲವೂ ಪಕ್ಷದ ಚೌಕಟ್ಟಿನಲ್ಲಿ ನಡೆಯಬೇಕು ಪ್ರತ್ಯೇಕ ಸಭೆಗಳ ಮೂಲಕ ಗೊಂದಲ ಮೂಡಿಸುವ ಕೆಲಸ ಮಾಡದೆ ಶಿಸ್ತು ಕಾಪಾಡಲು ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    ರಾಜ್ಯ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ನಡೆಸಿದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ನಾವು ವಿಜಯೇಂದ್ರ ಬಣ ಅಥವಾ ಯತ್ನಾಳ್‌ ಬಣ ಎಂದು ಭಾವಿಸಬೇಡಿ ಬಿಜೆಪಿಯಲ್ಲಿ ಇರುವುದು ಒಂದೇ ಬಣ. ಪಕ್ಷ ಒಂದು ಬಾರಿ ನಿರ್ಧಾರ ಮಾಡಿದ ಮೇಲೆ ಯಾರೊಬ್ಬರು ಪ್ರಶ್ನೆ ಮಾಡುವಂತಿಲ್ಲ ಎಂದು ಹೇಳಿದ್ದಾರೆನ್ನಲಾಗಿದೆ ‌
    ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕಾರ್ಯಕರ್ತರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಎಲ್ಲೇ ಹೋದರೂ ಇಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಶ್ನೆ ಮೇಲೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ಯಾರಿಗೂ ಶೋಭೆ ತರುವುದಿಲ್ಲ ಎಂದು ಅಸಮಾಧಾನ ಹೊರಹಾಕಿದರು.
    ಸರ್ಕಾರದ ವಿರುದ್ದ ಸದನದ ಒಳಗೂ ಮತ್ತು ಹೊರಗೂ ಹೋರಾಟ ನಡೆಸಲು ಸಾಕಷ್ಟು ಅಸ್ತ್ರಗಳಿವೆ. ಆದೆ ನಮೊಳಗಿನ ಕಚ್ಚಾಟದಿಂದ ಆಡಳಿತ ಪಕ್ಷಕ್ಕೆ ನಾವೇ ಅಸ್ತ್ರಗಳ ಮೇಲೆ ಅಸ್ತ್ರ ನೀಡುತ್ತಿದ್ದೇವೆ. ಇದು ಪಕ್ಷದ ಸಂಘಟನೆಗೆ ಹಿನ್ನಡೆ ಉಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಇದಕ್ಕೂ ಮುನ್ನ ಮಾಜಿ ಮಂತ್ರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ರೇಣುಕಾಚಾರ್ಯ ನೇತೃತ್ವದ ತಂಡ ಅವರನ್ನು ಭೇಟಿ ಮಾಡಿ ಪಕ್ಷದ ಇತ್ತೀಚಿನ ವಿದ್ಯಮಾನಗಳು ಬಗ್ಗೆ ವರಿಷ್ಠರ ಜೊತೆ ಚರ್ಚಿಸಲು ನಿಯೋಗದೊಂದಿಗೆ ಬರಲು ಅವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಪಕ್ಷದ ಅಧ್ಯಕ್ಷರ ಜೊತೆ ಮಾತನಾಡಿ ಸಮಯ ನಿಗದಿ ಪಡಿಸಿ ಕೊಡುವುದಾಗಿ ತಿಳಿಸಿದರು.
    ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮಂತ್ರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮುಂದಿನ ದಿನಗಳಲ್ಲಿ ವಾಲ್ಮೀಕಿ ಹಗರಣ, ಬಾಣಂತಿಯರ ಸಾವು ಪ್ರಕರಣದಲ್ಲಿ ಹೋರಾಟ ಮಾಡ್ತೇವೆ. ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ಮಾಡ್ತೇವೆ. ವಿಜಯೇಂದ್ರ ಅವರೇ ಮುಂದಿನ ಚುನಾವಣೆವರೆಗೆ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬೇಕು. ಅವರ ನೇತೃತ್ವದಲ್ಲೇ ಚುನಾವಣೆ ನಡೆಯಬೇಕು ಅಂತ ಹೇಳಿದ್ದೇವೆ. ದೆಹಲಿಗೂ ಬರ್ತೇವೆ ಅಂತ ರಾಧಾ ಮೋಹನದಾಸ್ ಅವರೆದುರು ಹೇಳಿದ್ದೇವೆ ಎಂದು ತಿಳಿಸಿದರು.
    ರೇಣುಕಾಚಾರ್ಯ ಮಾತನಾಡಿ ಪಕ್ಷದ ಗೊಂದಲಗಳ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ. ಯಾರು ಏನು ಬೇಕಾದರೂ ಹೇಳಲಿ, ರಾಜ್ಯದಲ್ಲಿ ಪಕ್ಷ ಕಟ್ಟಿದವರು ಯಡಿಯೂರಪ್ಪ, ಅನಂತ್ ಕುಮಾರ್, ಹಿರಿಯರ ಬೆಂಬಲವೂ ಇತ್ತು. ಹಾಗೆಯೇ ವಿಜಯೇಂದ್ರ ಸಹ ಪಕ್ಷ ಕಟ್ತಾರೆ, ಮತ್ತೆ ಪಕ್ಷದ ಅಧಿಕಾರಕ್ಕೆ ತರ್ತಾರೆ. ಆದರೆ ಐದಾರು ಜನ ಪಕ್ಷದಲ್ಲಿ ಗೊಂದಲ ಮೂಡಿಸ್ತಿದ್ದಾರೆ, ಈ ಐವರ ಬಗ್ಗೆಯೂ ಮಾತಾಡಿದ್ದೇವೆ. ನಾನು ಅವರ ಹೆಸರು ಹೇಳಲು ಇಷ್ಟಪಡಲ್ಲ ಎಂದು ಹೇಳಿದರು.

    Verbattle
    Verbattle
    Verbattle
    Election ಬಿಜೆಪಿ Bengaluru ಯಡಿಯೂರಪ್ಪ ವಾಲ್ಮೀಕಿ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿ ವಿರುದ್ಧ ರಾಜ್ಯದಲ್ಲಿ ಯಾಕಿಲ್ಲ ಕ್ರಮ
    Next Article ಯತ್ನಾಳ್ ವಿರುದ್ಧ ಕ್ರಮಕ್ಕೆ ಮೀನಾಮೇಷ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • mostbet_gqEa on ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    • Tvrrhy on ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.