ಬೆಂಗಳೂರು,ಜು.3-
ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಮುಖ್ಯಮಂತ್ರಿಗಳ ಕಣ್ಣ ಮುಂದೆಯೇ ಬಹುಕೋಟಿ ಹಗರಣ ನಡೆದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲೆತ್ನಿಸಿದರು.
ಕುಮಾರಕೃಪಾ ಅತಿಥಿ ಗೃಹದ ಸಮೀಪ ಪ್ರತಿಪಕ್ಷ ನಾಯಕ ಆರ.ಅಶೋಕ್ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಿಎಂ ನಿವಾಸದತ್ತ ತೆರಳಲು ಅಣಿಯಾಗುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಪೊಲೀಸರು ಎಲ್ಲರನ್ನೂ ವಶಕ್ಕೆ ತೆಗೆದುಕೊಂಡರು.
ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್,ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯನವರು ಮೂಗಿನಡಿಯೇ ಸುಮಾರು 187 ಕೋಟಿ ಹಗರಣ ನಡೆದಿದೆ. ಅವರ ಅನುಮತಿ ಇಲ್ಲದೇ ನಿಗಮದ ಹಣವನ್ನು ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆಯಲು ಅನುಮತಿ ನೀಡಿದವರು ಯಾರು?, ಹಣಕಾಸು ಇಲಾಖೆಯ ಕಾರ್ಯದರ್ಶಿ ಒಪ್ಪಿಗೆಯಿಲ್ಲದೆ, ಇದು ನಡೆಯಲು ಸಾಧ್ಯವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದರಲ್ಲಿ ಭಾರಿ ದೊಡ್ಡ ಮೊತ್ತದ ಹಗರಣ ನಡೆದಿರುವುದರಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ನೈತಿಕತೆ ಕಳೆದುಕೊಂಡಿದ್ದಾರೆ. ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ತೆಲಂಗಾಣದ ಬಾರ್ ಅಂಡ್ ರೆಸ್ಟೋರೆಂಟ್‌ಗೆ, ಚಿನ್ನದ ಅಂಗಡಿಗಳಿಗೆ ಟಕಾಟಕ್ ಎಂದು ವರ್ಗಾವಣೆ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಫಲವಾಗಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರೂ, ಸ್ವಯಂಪ್ರೇರಣೆಯಿಂದ ನೀಡಿದ್ದಾರೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಈಗ ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.
ಹಿಂದೆ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆಯೇ ಈಗ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ತುರ್ತು ಸ್ಥಿತಿ ಜಾರಿಗೊಳಿಸಿದೆ. ಬಿಜೆಪಿ ಶಾಸಕರು ಸಿಎಂ ಮನೆಗೆ ಬರಬಾರದೆಂದು ನೂರಾರು ಪೊಲೀಸರನ್ನು ನಿಯೋಜಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದ ಭಯೋತ್ಪಾದಕರನ್ನು ಹಿಡಿಯಲು ಐದಾರು ಪೊಲೀಸರನ್ನು ಕಳುಹಿಸಿದ್ದರು. ಇಲ್ಲಿ ಶಾಸಕರನ್ನು ಹಿಡಿಯಲು ನೂರಾರು ಪೊಲೀಸರನ್ನು ಕಳುಹಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದರು
ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಅರವಿಂದ್ ಬೆಲ್ಲದ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.
Previous ArticlePolice ಆಡಳಿತ ಯಂತ್ರಕ್ಕೆ ಮೇಜರ್ Surgery.
Next Article ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
3 Comments
идеи малого бизнеса идеи малого бизнеса .
stories without stories without .
Selector