Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಪಿಎಲ್ ಕಾರ್ಡ್ ಬೇಕೆಂದವರಿಗೆ ಸಿಹಿ ಸುದ್ದಿ.
    Trending

    ಬಿಪಿಎಲ್ ಕಾರ್ಡ್ ಬೇಕೆಂದವರಿಗೆ ಸಿಹಿ ಸುದ್ದಿ.

    vartha chakraBy vartha chakraJuly 9, 202430 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.8:
    ಬಿಪಿಎಲ್ ಕಾರ್ಡುಗಳಿಗಾಗಿ ಕಾಯುತ್ತಿದ್ದ ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ ಅನಧಿಕೃತ ಬಿಪಿಎಲ್ ಕಾಡುಗಳನ್ನು ಕೂಡಲೇ ಪತ್ತೆ ಹಚ್ಚಿ ವಶಪಡಿಸಿಕೊಳ್ಳುವ ಮೂಲಕ ಅರ್ಹರಿಗೆ ಪಡಿತರ ಚೀಟಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು ರಾಜ್ಯದಲ್ಲಿ ಶೇ. 80 ರಷ್ಟು ಕುಟುಂಬಗಳು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು
    ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 3784 ಅರ್ಜಿಗಳು ಇತ್ಯರ್ಥಪಡಿಸಲು ಬಾಕಿಯಿದ್ದು ಸಕಾಲದ ಅವಧಿಯ ಮಿತಿಯಲ್ಲಿಯೇ ಇವೆ. ಇನ್ನು ಮುಂದೆ 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
    ರಾಜ್ಯದಲ್ಲಿ 76 ಲಕ್ಷ ಜನರಿಗೆ ಪಿಂಚಣಿ ನೀಡುತ್ತಿದ್ದು, ದೇಶದಲ್ಲೇ ಅಧಿಕವಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎನ್‌ಪಿಸಿಐ ಮ್ಯಾಪಿಂಗ್‌ ಮಾಡುವಲ್ಲಿ 2 ಲಕ್ಷ ಪ್ರಕರಣಗಳು ಬಾಕಿಯಿವೆ. ಇದನ್ನು ಆದ್ಯತೆ ಮೇರೆಗೆ ಮಾಡಲು ಸೂಚನೆ ನೀಡಲಾಗಿದೆ.
    ಜಿಲ್ಲೆಯಲ್ಲಿ ಎಷ್ಟು ಪಿಂಚಣಿ ಅರ್ಜಿಗಳು ಬಾಕಿಯಿವೆ ಎಂಬುವುದನ್ನು ಆಯಾ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕೂಡಲೇ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಸಾವು ಸಂಭವಿಸಿದ ತಕ್ಷಣ ಆಯಾ ಪಿಂಚಣಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು
    ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ ಎಂದು ಹೇಳಿದರು.
    ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್‌ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಂ ಪಂಚಾಯತ್‌ ನಲ್ಲಿ ಟಾಸ್ಕ್‌ ಪೋಸ್ಟ್‌ ರಚನೆ. ಕಂದಾಯ ಇಲಾಖೆ, ಪಂಚಾಯತ್‌, ಪೋಲಿಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್‌ ಅಧಿಕಾರಿ ನೇಮಕ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಾ ಸಲಕರಣೆ ಲಭ್ಯವಾಗಿಡುವಂತೆ ಸೂಚನೆ ನೀಡಲಾಯಿತು.
    ಬೆಳೆ ಹಾನಿ, ಮನೆ ಹಾನಿ ಎಸ್‌ಡಿಆರ್‌ಎಫ್‌ ಪ್ರಕಾರ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ. ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು.
    27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್‌ಪೋರ್ಸ್‌ ರಚಿಸಬೇಕು. 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. 2225 ಗ್ರಾಮಗಳು 2242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಉತ್ತಮವಾಗಿ ಮಳೆಯಾಗಿರುವ ಕಾರಣ ಎಲ್ಲಾ ಜಲಾಶಯಗಳಲ್ಲಿ ಒಟ್ಟು 293 ಟಿಎಂಸಿ ನೀರು ಸಂಗ್ರಹವಿದೆ.
    ಈ ಬಾರಿ ಪೂರ್ವ ಮುಂಗಾರಿನಲ್ಲಿ 3714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್‌ಡಿಆರ್‌ಎಫ್‌ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು ಎಂದು ತಾಕೀತು ಮಾಡಿದರು
    ಜನಸ್ಪಂದನ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಬೇಕು. ಅಧಿವೇಶನದ ಮುಗಿದ ಬಳಿಕ ಜಿಲ್ಲಾ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ತಪ್ಪದೇ ಜನಸ್ಪಂದನಾ ಸಭೆಗಳನ್ನು ಮಾಡಬೇಕು. ಜಿಲ್ಲಾಧಿಕಾರಿಗಳು ಸ್ವೀಕರಿಸುವ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಬೇಕು. 40702 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ಇನ್ನೂ 8ಸಾವಿರ ಅರ್ಜಿಗಳು ವಿಲೇವಾರಿಗೆ ಬಾಕಿಯಿದೆ. ತಕ್ಷಣ ವಿಲೇವಾರಿ ಮಾಡಿ. ಕಲ್ಬುರ್ಗಿಯಲ್ಲಿ ಅಧಿವೇಶನ ಮುಗಿದ ಬಳಿಕ ಮುಂದಿನ ತಿಂಗಳು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು
    ರೈತರ ಆತ್ಮಹತ್ಯೆ
    ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು. ಕಾನೂನು ಪ್ರಕಾರ ಪರಿಶೀಲಿಸಿ 1003 ಅರ್ಹ ಪ್ರಕರಣಗಳಲ್ಲಿ 994 ರೈತರ ಕುಟುಂಬಕ್ಕೆ ಪರಿಹಾರ ಒದಗಿಸಲಾಗಿದೆ. ಕಳೆದ ಬಾರಿ ಸಭೆಯಲ್ಲಿ ಪರಿಹಾರ ನೀಡಿಕೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಾರಿ ಚುರುಕು ಮೂಡಿಸಲಾಗಿದೆ. ರೈತರ ಸಭೆ ಮಾಡಿ ಜಾಗೃತಿ, ಆತ್ಮವಿಶ್ವಾಸ ಮೂಡಿಸುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.
    ಜಮೀನು ಮಾರ್ಗಸೂಚಿ ದರಕ್ಕಿಂತ ಕಡಿಮೆ ಬೆಲೆಗೆ ನೊಂದಣಿ ಅಗುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಬಾಕಿ ರಾಜಸ್ವವನ್ನು ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವರ್ಷದ ಮಾರ್ಚ್‌ ಅಂತ್ಯದ ವೇಳೆಗೆ ಇಂತಹ 24519 ಪ್ರಕರಣಗಳು ಬಾಕಿಯಿದ್ದು, 310 ಕೋಟಿ ರೂ. ರಾಜಸ್ವ ವಸೂಲಾತಿ ಮಾಡಬೇಕಾಗಿದೆ. ಇದನ್ನು ತ್ವರಿತವಾಗಿ ಮಾಡಲು ಸೂಚನೆ ನೀಡಿದರು*

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಆರೋಗ್ಯ ಕಾಂಗ್ರೆಸ್ ಕಾನೂನು ನ್ಯಾಯ ಪೋಲಿಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಡಿಯುವ ನೀರು ಕಲುಷಿತಗೊಳ್ಳಬಾರದು.
    Next Article ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Daviddek on May 3, 2023 51st Year Free Mass Marriage at Sri Kshetra Dharmasthala
    • Daviddek on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.