ಬೆಂಗಳೂರು,ನ.12-
ಈಶಾನ್ಯ ರಾಜ್ಯಗಳ ಮೂಲಕ ದೇಶದೊಳಗೆ ನುಸುಳಿರುವ ಬಾಂಗ್ಲಾದೇಶದ ಪ್ರಜೆಗಳು Bengaluru, ಬೆಳಗಾವಿ, ಹುಬ್ಬಳ್ಳಿ ಮಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ನೆಲೆಸಿದ್ದು ಇವರು ನಿಷೇಧಿತ ಉಗ್ರ ಸಂಘಟನೆ ಅಲ್ ಖೈದಾ ಜೊತೆನಂಟು ಹೊಂದಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು
ಕರ್ನಾಟಕ ಸೇರಿ ದೇಶದ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ
ದಾಳಿ ನಡೆಸಿದ್ದಾರೆ.
ಕಟ್ಟಡ ನಿರ್ಮಾಣ, ಹೋಟೆಲ್, ತೋಟಗಳ ಕಾರ್ಮಿಕರು ಸೇರಿದಂತೆ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿರುವ ಇವರು ನಕಲಿ ಆಧಾರ್ ಕಾರ್ಡ್ ಗಳನ್ನು ಮಾಡಿಸಿಕೊಂಡು ನೆಲೆಸಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತ ಖಚಿತ ಮಾಹಿತಿ ಆಧಾರದ ಮೇಲೆ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ, ತ್ರಿಪುರಾ ಸೇರಿ ಒಂಭತ್ತು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆಯನ್ನು ಎನ್ ಐಎ ಅಧಿಕಾರಿಗಳು ಕೈಗೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಶಂಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು ವಿವರ, ಮೊಬೈಲ್ ಫೋನ್, ಲ್ಯಾಪ್‌ಟಾಪ್ ಬಳಸಿ ಮಾಡುವ ಚಟುವಟಿಕೆಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Previous Articleಕಾನೂನು ಕುಣಿಕೆಯಲ್ಲಿ ಟಾಕ್ಸಿಕ್ ಸಿನಿಮಾ ತಂಡ.
Next Article ಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದರಾ ಪೊಲೀಸರು..