ಬೆಂಗಳೂರು,ಡಿ.8:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ ದಿಢೀರ್ ಚಾಲನೆ ಸಿಕ್ಕಿದೆ
‘Bengaluru ಟ್ವಿನ್ ಟನಲ್ ಪ್ರಾಜೆಕ್ಟ್’ ಎಂದು ಹೆಸರಿಡಲಾಗಿರುವ ಈ ಯೋಜನೆ ಜಾರಿಯಿಂದ ಮಹಾನಗರ ಬೆಂಗಳೂರಿನ ಸಂಚಾರ ದಟ್ಟಣೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಸುರಂಗ ರಸ್ತೆಯು ಹೆಬ್ಬಾಳದ ಎಸ್ಟೀಮ್ ಮಾಲ್ ಜಂಕ್ಷನ್‌ನಿಂದ ಮೇಖ, ವೃತ್ತ, ಅರಮನೆ ರಸ್ತೆ, ಗಾಲ್ಫ್ ಕೋರ್ಸ್ ರಸ್ತೆ, ಚಾಲುಕ್ಯ ವೃತ್ತ, ಕಬ್ಬನ್ ಪಾರ್ಕ್, ಕೆ.ಎಚ್.ರಸ್ತೆ, ಲಾಲ್‌ಬಾಗ್, ಜಯನಗರ ಮಾರ್ಗವಾಗಿ ಸಿಲ್ಕ್ ಬೋರ್ಡ್ ಜಂಕ್ಷನ್‌ಗೆ ಹಾದು ಹೋಗಲಿದೆ.
ಹೆಬ್ಬಾಳದ ಎಸ್ಟೀಮ್ ಮಾಲ್ ಜಂಕ್ಷನ್, ಅರಮನೆ ರಸ್ತೆ, ಗಾಲ್ಫ್ ಕೋರ್ಸ್ ರಸ್ತೆ, ಜಯನಗರದ ಅಶೋಕ ಪಿಲ್ಲರ್, ಸಿಲ್ಕ್ಬೋರ್ಡ್ ಜಂಕ್ಷನ್‌ನಲ್ಲಿ ಸುರಂಗ ರಸ್ತೆಯ ಪ್ರವೇಶ, ನಿರ್ಗಮನ ದ್ವಾರಗಳಿರಲಿವೆ. ತಳಭಾಗದ 3 ಪಥ, ಮೇಲ್ಬಾಗದ ಎ2 ಪಥದ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಇರಲಿದೆ.
ಇಲ್ಲಿ ಸಂಚರಿಸುವ ವಾಹನಗಳಿಂದ ಟೋಲ್ ಸಂಗ್ರಹಿಸಲು ಉದ್ದೇಶಿಸಲಾಗಿದೆ. ಈ ರಸ್ತೆಯಲ್ಲಿ ವಾಹನಗಳು ಗಂಟೆಗೆ. 135-40 ಕಿ.ಮೀ. ವೇಗದಲ್ಲಿ ಸಂಚರಿಸಬಹುದಾಗಿದೆ.
ಇದೀಗ ಈ ಯೋಜನೆಗೆ ಸಾಲ ನೀಡುವುದಕ್ಕೆ ಸಿದ್ದವಿರುವ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ‘ಬಂಡವಾಳ ಹೂಡಿಕೆಗೆ ಆಸಕ್ತಿ ವ್ಯಕ್ತಪಡಿಸುವಿಕೆ’ಯ ‘ಆರ್ಥಿಕ ಬಿಡ್’ ಅನ್ನು ಬಿಬಿಎಂಪಿ ಆಹ್ವಾನಿಸಿದೆ.
ರಾಜ್ಯ ಸರ್ಕಾರದ ಗ್ಯಾರಂಟಿಯೊಂದಿಗೆ 19 ಸಾವಿರ ಕೋಟಿ ಸಾಲ ಪಡೆದು ಸುರಂಗ ರಸ್ತೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ .ಪ್ರಾಯೋಗಿಕವಾಗಿ ಉತ್ತರ- ದಕ್ಷಿಣ ಕಾರಿಡಾರ್ ಹೆಬ್ಬಾಳದ ಎಸ್ಟೀಮ್ ಮಾಲ್ ನಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಕೆಎಸ್‌ಆರ್‌ಪಿ ಜಂಕನ್ ವರೆಗೆ 18.5 ಕಿ.ಮೀ ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಕಾಮಗಾರಿ ಆರಂಭಿಸುವುದಕ್ಕೆ ಮುಂದಾಗಿದೆ.
ಬಂಡವಾಳ ಹೂಡಿಕೆ ಮಾಡುವ ಹಣಕಾಸು ಸಂಸ್ಥೆಗಳಿಗೆ ಮತ್ತು ಬ್ಯಾಂಕ್ ಗಳಿಗೆ ರಾಜ್ಯ ಸರ್ಕಾರವು ಗ್ಯಾರಂಟಿ ನೀಡಲಿದೆ. ಅದನ್ನು ಹೊರತು ಪಡಿಸಿ ಸಾಲ ನೀಡುವ ಸಂಸ್ಥೆಗಳಿಗೆ ಭದ್ರತೆ ಆಸ್ತಿ ಅಡಮಾನದ ಬಗ್ಗೆ ಈಗಲೇ ಯಾವುದೇ ನಿರ್ಧಾರ ಮಾಡಿಕೊಂಡಿಲ್ಲ.
ಬಂಡವಾಳ ಹೂಡಿಕೆ ಮಾಡುವುದಕ್ಕೆ ಆಸಕ್ತಿ ಹೊಂದಿರುವ ಹಣಕಾಸು ಸಂಸ್ಥೆಗಳು ತಾವು ಒದಗಿಸಬಹುದಾದ ಸಾಲಧ ಮೊತ್ತ ಹಾಗೂ ಬಡ್ಡಿ ದರ ತಿಳಿಸುವುದಕ್ಕೆ ಡಿ.19 ಕೊನೆಯ ದಿನವಾಗಿದೆ. ಈ ಬಗ್ಗೆ ಗೊಂದಲ ಮತ್ತು ಸಷ್ಟತೆ ಪಡೆದುಕೊಳ್ಳಲು ಡಿ.9ರಿಂದ 11ವರೆಗೆ ಅವಕಾಶ ನೀಡಲಾಗಿದೆ. ಡಿ.16ರಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರ ಕಚೇರಿಯಲ್ಲಿ ಈ ಕುರಿತು ಬಿಡ್ ಪೂರ್ವಭಾವಿ ಸಭೆ ನಡೆಸಲಾಗುತ್ತದೆ. ಇದಾದ ನಂತರ ಡಿ.19ರ ಸಂಜೆ 4 ಗಂಟೆಯ ಒಳಗೆ ಮುಚ್ಚಿದ ಲಕೋಟೆಯಲ್ಲಿ ಸಾಲ ಒದಗಿಸುವ ಮೊತ್ತ ಹಾಗೂ ಬಡ್ಡಿದರದ ಬಿಡ್ ಸಲ್ಲಿಕೆ ಮಾಡಬೇಕೆಂದು ಸೂಚಿಸಲಾಗಿದೆ.
Previous Articleಯತ್ನಾಳ್ ವಿರುದ್ಧ ಕ್ರಮಕ್ಕೆ ಮೀನಾಮೇಷ.
Next Article ಮೋದಿಯವರ ಹವ್ಯಾಸಗಳೇನು ಗೊತ್ತಾ?