ಉದ್ಯಾನ ನಗರಿ ಬೆಂಗಳೂರಿನಲ್ಲಿ ಏಪ್ರಿಲ್ 24 ರಿಂದ ಮೇ 3 ರವರೆಗೆ ಕ್ರೀಡಾ ಹಬ್ಬ.ಇದಕ್ಕಾಗಿ ನಗರದ ಕಂಠೀರವ ಮೈದಾನ ಸೇರಿದಂತೆ ಕ್ರೀಡಾಕೂಟ ನಡೆಯುತ್ತಿರುವ ಮೈದಾನಗಳು ಸಂಪೂರ್ಣ ಸಜ್ಜುಗೊಂಡಿವೆ .
ಮುಂಬರುವ ಏಷ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಪೂರ್ವಭಾವಿಯಂತಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಕ್ರೀಡಾಕೂಟ ಬೆಂಗಳೂರಿನಲ್ಲಿ ನಡೆಯುತ್ತಿದೆ.
ದೇಶದ 190 ವಿಶ್ವ ವಿದ್ಯಾಲಯಗಳ ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ದೇಸಿ ಕ್ರೀಡೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಮೊಟ್ಟ ಮೊದಲ ಬಾರಿಗೆ ಈ ಕ್ರೀಡಾಕೂಟದಲ್ಲಿ ಮಲ್ಲಗಂಬವನ್ನು ಸೇರಿಸಲಾಗಿದ್ದು, ಯೋಗ, ಕರಾಟೆ ಸೇರಿದಂತೆ 20 ಕ್ರೀಡೆಗಳ ಸ್ಪರ್ಧೆ ನಡೆಯುತ್ತಿದೆ.
ಏಪ್ರಿಲ್ 24ರಂದು ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ , ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.
ದೇಶದ ವಿವಿಧ ವಿಶ್ವ ವಿದ್ಯಾಲಯಗಳ ಸುಮಾರು 4,500 ಸಾವಿರ ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ಜೈನ್ ವಿವಿ, ಗ್ಲೋಬಲ್ ಕ್ಯಾಂಪಸ್, ಜೈನ್ಸ್ ಸ್ಪೋರ್ಟ್ಸ್ ಸ್ಕೂಲ್, ನೇತಾಜಿ ಸುಭಾಶ್ ಚಂದ್ರಬೋಸ್ ಶೂಟಿಂಗ್ ರೇಂಜ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಿವೆ.
ಪರಿಸರದ ಬಗ್ಗೆ ಅರಿವು ಮೂಡಿಸಲು ಗೇಮ್ಸ್‌ನ್ನು ‘ಹಸಿರು ಕ್ರೀಡಾಕೂಟ’ ಎಂದು ಘೋಷಿಸಲಾಗಿದೆ.