ಬೆಂಗಳೂರು.
ಬಹುಕಾಲದಿಂದ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿ
ತೆರಿಗೆ ಬಾಕಿ ಪಾವತಿಸಲು ಒಂದು ಬಾರಿ ಪರಿಹಾರ ಯೋಜನೆಯನ್ನು (ಒಟಿಎಸ್) ಜಾರಿಗೆ ತರಲಾಗಿದೆ. ಜುಲೈ 31ರವರೆಗೆ ಈ ಅನುಕೂಲ ಪಡೆಯಬಹುದು. ಯಾವುದೇ ಕಾರಣಕ್ಕೂ ಈ ಅವಧಿಯನ್ನು ವಿಸ್ತರಿಸುವುದಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿ ತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದರೂ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿ ಒಟಿಎಸ್ ವ್ಯವಸ್ಥೆ ಜಾರಿಗೆ ತಂದಿದೆ.ಈ ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿ ಮೇಲೆ ಪಾವತಿಸಬೇಕಾದ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. ಇದರ ಅನುಕೂಲವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಬಿಬಿಎಂಪಿಗೆ 5,230 ಕೋಟಿ ಆಸ್ತಿ ತೆರಿಗೆ ಬರಬೇಕಾಗಿದೆ. ಬೆಂಗಳೂರಲ್ಲಿ 20 ಲಕ್ಷ ಆಸ್ತಿಗಳನ್ನು ಗುರುತಿಸಿದ್ದೇವೆ. ಈಗಾಗಲೇ 8.6 ಲಕ್ಷ ಆಸ್ತಿದಾರರು ತೆರಿಗೆ ಕಟ್ಟಿದ್ದಾರೆ. ಈವರೆಗೆ ₹ 1,300 ಕೋಟಿ. ಆಸ್ತಿ ತೆರಿಗೆ ಪಾವತಿ ಮಾಡಿದ್ದಾರೆ. ಇನ್ನೂ ₹ 3,900 ಕೋಟಿ ಆಸ್ತಿ ತೆರಿಗೆ ಬರಬೇಕಾಗಿದೆ. ಇದನ್ನು ವಸೂಲಿ ಮಾಡುವ ದೃಷ್ಟಿಯಿಂದ ಒನ್ ಟೈಂ ಸೆಟಲ್ ಮೆಂಟ್ ವ್ಯವಸ್ಥೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು
ಈ ಯೋಜನೆ ಜುಲೈ 31 ರವರೆಗೆ ಜಾರಿಯಲ್ಲಿರಲಿದೆ
ಸ್ಕೀಂ ಜಾರಿಗೆ ಬಂದ ಬಳಿಕ ಇಲ್ಲಿಯವರೆಗೆ 4 ಲಕ್ಷ ಸುಸ್ತಿದಾರರ ಪೈಕಿ ಸುಮಾರು 50 ಸಾವಿರ ಜನರು ಮಾತ್ರ ತೆರಿಗೆ ಪಾವತಿ ಮಾಡಿದ್ದಾರೆ ಎಂದರು.
ತೆರಿಗೆ ವ್ಯಾಪ್ತಿಗೆ ಬಾರದೇ ಇರುವವರು ಬಹಳಷ್ಟು ಜನ ಇದ್ದಾರೆ. ಅವರು ಸೂಕ್ತ ದಾಖಲಾತಿ ನೀಡಿದರೆ 90 ದಿನಗಳಲ್ಲಿ ಅದನ್ನು ಪರಿಶೀಲಿಸುತ್ತೇವೆ. ದಾಖಲೆ ಪರಿಶೀಲಿಸಿ ಅದರನ್ವಯ ಎ ಅಥವಾ ಬಿ ಖಾತೆ ಕೊಡಲಾಗುತ್ತದೆ. ಬೆಂಗಳೂರಿನ ಎಲ್ಲಾ 20 ಲಕ್ಷ ಆಸ್ತಿಗಳ ದಾಖಲಾತಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈಗಾಗಲೇ 8 ಲಕ್ಷ ಆಸ್ತಿಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ. ಮೂರು ತಿಂಗಳಲ್ಲಿ ಪ್ರಕ್ರಿಯೆ ಮುಗಿಸುವಂತೆ ಸೂಚನೆ ನೀಡಲಾಗಿದೆಬಳಿಕ ಅವರ ಮನೆಗಳಿಗೆ ಖಾತೆ ಕಳುಹಿಸಿಕೊಡಲಾಗುವುದು ಎಂದೂ ಅವರು ವಿವರಿಸಿದರು
Previous Articleಅಬಕಾರಿ ಅಧಿಕಾರಿಗಳಿಗೆ CM ನೀಡಿದ ಸೂಚನೆ ಏನು ಗೊತ್ತಾ.
Next Article ಶಕ್ತಿ ಯೋಜನೆಗೆ ನೀಡಿದ್ದು 5,526 ಕೋಟಿ.
3 Comments
наркологическая скорая помощь москва наркологическая скорая помощь москва .
заказать проститутку заказать проститутку .
Можно ли быстро купить диплом старого образца и в чем подвох?