ಬೆಂಗಳೂರು,ಜೂ.20-
ಬೆಂಗಳೂರಿನ ಪ್ರತಿಷ್ಠಿತ ವಾಣಿಜ್ಯ ಪ್ರದೇಶ ಮತ್ತು ಬಡಾವಣೆಗಳಲ್ಲಿ ನಡೆಯುತ್ತಿದ್ದ ಲೈವ್ ಬ್ಯಾಂಡ್ ಹೆಸರಿನ ಅಶ್ಲೀಲ ನೃತ್ಯ ಪ್ರದರ್ಶನ ಹಾಗೂ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು Bengaluru ಪೊಲೀಸರು ಭೇದಿಸಿದ್ದಾರೆ.
ನಿಯಮ ಉಲ್ಲಂಘಿಸಿ ಯುವತಿಯರನ್ನು ಬಳಸಿಕೊಂಡು ತಡರಾತ್ರಿಯವರೆಗೂ ಅಶ್ಲೀಲ ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡಿದ್ದ 17ಕ್ಕೂ ಹೆಚ್ಚು ಪ್ರತಿಷ್ಠಿತ ಬಾರ್, ಪಬ್, ಕ್ಲಬ್‌ಗಳ ಮೇಲೆ ಪೊಲೀಸರು ನಿನ್ನೆ ರಾತ್ರಿ ದಿಢೀರ್ ದಾಳಿ ನಡೆಸಿದರು.
ನಿಯಮ ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆ ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ಇರುವ
ಕ್ಲಬ್ ಒನ್, ರಂಬಾ, ಬ್ರಿಗೇಡ್ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್‌ಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ಅಕ್ರಮ ನಡೆಯುತ್ತಿರುವುದನ್ನು ಪತ್ತೆ ಹಚ್ಚಿ ಪರಿಶೀಲನೆ ಕೈಗೊಂಡಿದ್ದಾರೆ.
ಅವಧಿ ಮೀರಿ ಬಾರ್ ತೆಗೆದಿರುವುದು, ಯುವತಿಯರು ಅಶ್ಲೀಲ ಬಟ್ಟೆ ತೊಟ್ಟು ಡ್ಯಾನ್ಸ್ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆಯ ಅಂಶಗಳು ಬೆಳಕಿಗೆ ಬಂದಿವೆ.
ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್‌ಗಳ ಮೇಲೂ ದಾಳಿ ನಡೆಸಲಾಗಿದ್ದು, ಕಬ್ಬನ್ ಪಾರ್ಕ್, ಅಶೋಕ್ ನಗರ ಸೇರಿದಂತೆ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್‌ಗಳ ಮೇಲೆ ಪ್ರಕರಣ ದಾಖಲಾಗಿದೆ.
ಈ ಡ್ಯಾನ್ಸ್ ಬಾರ್‌ಗಳಲ್ಲಿ ಈಶಾನ್ಯ ರಾಜ್ಯಗಳ ಹಲವು ಯುವತಿಯರನ್ನು ಕರೆತಂದು ತಡರಾತ್ರಿಯವರೆಗೂ ಅಶ್ಲೀಲ ಡ್ಯಾನ್ಸ್ ಮಾಡಿಸಲಾಗುತ್ತಿತ್ತು. ಮದ್ಯದ ಹೊಳೆ ಯಥೇಚ್ಛವಾಗಿ ಹರಿಯುತ್ತಿದ್ದು, ಇದು ಕೆಲವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೂ ತಿಳಿದಿದ್ದರೂ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಗೊತ್ತಾಗಿದೆ. ಕೆಲವು ಕಡೆ ಗುಪ್ತ ಪ್ರದೇಶಗಳಲ್ಲಿ ಅಶ್ಲೀಲ ನೃತ್ಯದ ಬಳಿಕ ಹೈಟೆಕ್ ವೇಶ್ಯಾವಾಟಿಕೆಗೂ ಅವಕಾಶ ಕಲ್ಪಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Previous Articleಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!
Next Article ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?