ಬೆಂಗಳೂರು,ಜೂ. 10:
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಒಟ್ಟಾಗಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಯಿತು.ಈ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ Election ಕುರಿತು ಮಾಹಿತಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಆದರೆ, ಈ ಬಾರಿ ಆ ರೀತಿ ಆಗಿಲ್ಲ,ಇದೂ ಸೇರಿದಂತೆ ಸೋಲಿಗೆ ಅನೇಕ ಕಾರಣಗಳಿವೆ ಎಂದರು.
ವಿಧಾನಸಭೆ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣಾ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆಯೂ ಫಲಿತಾಂಶ ನಮಗೆ ಕೈ ಕೊಟ್ಟಿತು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ ಎಂದು ತಿಳಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ನಡುವಿನ ವಾಕ್ಸಮರಕ್ಕೆ ಪ್ರತಿಕ್ರಿಯಿಸಿದ ಸಚಿವರು, ತಾವು ಯಾರೊಬ್ಬರ ಪರವಾಗಿ ಇಲ್ಲ, ಇಬ್ಬರ ಪರವಾಗಿಯೂ ಇದ್ದೇನೆ. ಇಬ್ಬರೂ ದೊಡ್ಡ ನಾಯಕರು, ಒಟ್ಟಿಗೆ ಕುಳಿತು ಮಾತಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಈ ವೇಳೆ ಸಚಿವರು ಮನವಿ ಮಾಡಿದರು.
ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಉಪಸ್ಥಿತರಿದ್ದರು.
Previous Articleಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ.
Next Article ಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರವಂತೆ.!
6 Comments
where can i buy cheap clomid without dr prescription can i buy generic clomid pill how to buy clomiphene price where can i get generic clomiphene pill clomiphene pills where to get cheap clomiphene pill order clomiphene for sale
This is the description of topic I have reading.
More posts like this would prosper the blogosphere more useful.
order inderal 20mg generic – methotrexate 2.5mg canada order methotrexate 10mg online
how to get amoxicillin without a prescription – buy amoxicillin paypal where can i buy combivent
zithromax brand – nebivolol without prescription nebivolol 5mg brand