Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್
    ವಿಶೇಷ ಸುದ್ದಿ

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    vartha chakraBy vartha chakraMay 23, 202528 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಜಿನ ನಗರಿ ಮಡಿಕೇರಿ ಜನರ ಬಹುದಿನದ ಕನಸು ಸಾಕಾರಗೊಂಡಿದೆ. ಉದ್ಯೋಗ, ಆಸ್ಪತ್ರೆ ಮೊದಲಾದ ಕೆಲಸಗಳಿಗಾಗಿ ಮಡಿಕೇರಿಗೆ ಆಗಮಿಸುವ ಜನರ ಹಸಿವೆಯನ್ನು ನೀಗಿಸುವ ದೃಷ್ಟಿಯಿಂದ ಆರಂಭಿಸಲಾಗಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಯೋಜನೆ ಅಡಿಯಲ್ಲಿ ಸುಸಜ್ಜಿತ ಇಂದಿರಾ ಕ್ಯಾಂಟೀನ್ ತಲೆಯೆತ್ತಿ ನಿಂತಿದೆ.
    ಮಡಿಕೇರಿ ಕ್ಷೇತ್ರದ ಯುವ ಹಾಗೂ ಉತ್ಸಾಹಿ ಶಾಸಕ ಡಾ. ಮಂತರ್ ಗೌಡ ಅವರ ವಿಶೇಷ ಕಾಳಜಿ ಮತ್ತು ಪ್ರಯತ್ನದ ಪರಿಣಾಮವಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿದೆ.
    ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ ಅನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸುವ ಮೂಲಕ ಸೇವೆಗೆ ಸಮರ್ಪಿಸಿದರು. ಈ ಮೂಲಕ ಮಡಿಕೇರಿ ನಗರಕ್ಕೆ ಮತ್ತೊಂದು ಇಂದಿರಾ ಕ್ಯಾಂಟೀನ್ ಸೇರ್ಪಡೆಯಾಯಿತು.
    ಇಂದಿರಾ ಕ್ಯಾಂಟೀನ್ ಅನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಿ ಮಾತನಾಡಿದ ಅವರು ‘ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.
    ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು.
    ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವರು ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಅವಕಾಶ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ಆಸ್ಪತ್ರೆ ಆವರಣದಲ್ಲಿ ಆರಂಭಿಸಲಾಗಿದೆ ಎಂದು ತಿಳಿಸಿದರು
    ಕೃಷಿ ಕೂಲಿ ಕಾರ್ಮಿಕರು, ಆಸ್ಪತ್ರೆ ಸೇರಿದಂತೆ ನಾನಾ ಕಾರಣಗಳಿಂದ ಜಿಲ್ಲಾ ಕೇಂದ್ರಗಳಿಗೆ ಬರಲಿರುವ ಬಡವರು, ಕಳ ಮಾಧ್ಯಮ ವರ್ಗದ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಉಪಹಾರ ಮತ್ತು ಊಟ ಸಿಗುವ ವ್ಯವಸ್ಥೆ ಮಾಡಲಾಗಿದೆ.
    ಇದನ್ನು ನಿರ್ವಹಿಸುವವರು ರುಚಿ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಗ್ರಾಹಕರು
    ಇಂದಿರಾ ಕ್ಯಾಂಟೀನ್‍ನಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರವು ಸಹ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟಕ್ಕೆ ಹಣವನ್ನು ಭರಿಸಲಿದ್ದು, ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅವರು ಹೇಳಿದರು.
    ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಬೇಡಿಕೆಗೆ ತಕ್ಕಂತೆ ಆಹಾರ ಪೂರೈಸಬೇಕು ಎಂದು ಸೂಚಿಸಿದರು.
    ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ನಗರಸಭೆ ಸದಸ್ಯರಾದ ಎಂ.ಎ.ಮುಸ್ತಪಾ, ಅರುಣ್ ಶೆಟ್ಟಿ, ಮನ್ಸೂರ್ ಅಲಿ, ಬಿ.ಸಿ.ಜಗದೀಶ್, ಜುಲೈಕಾಬಿ, ಬಿ.ಎನ್.ಮುದ್ದುರಾಜು, ಪೌರಾಯುಕ್ತ ಎಚ್.ಆರ್.ರಮೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಸತೀಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ವೈದ್ಯಾಧಿಕಾರಿಗಳಾದ ಡಾ.ಪುರುಷೋತ್ತಮ, ಡಾ.ಶ್ವೇತಾ ಭಾಗವಹಿಸಿದ್ದರು

    Verbattle
    Verbattle
    Verbattle
    ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    Next Article ಸೋಮವಾರಪೇಟೆ ಜನರ ಕನಸು ಈಡೇರಿತು.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AU88 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Georgemen on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Cliftondef on ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.