Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    Trending

    ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.

    vartha chakraBy vartha chakraOctober 4, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.3:
    ನಮ್ಮ ಸಂವಿಧಾ‌ನದಲ್ಲಿ ಒಬ್ಬ ವ್ಯಕ್ತಿ ಒಂದು ಮತ ಎಂದು ಹೇಳಲಾಗಿದೆ ಈ ತತ್ವಕ್ಕೆ ಅಪಚಾರವೆಸಗುತ್ತಿರುವ ಬಿಜೆಪಿ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡು ನಡೆಸುತ್ತಿರುವ ಮತಗಳ್ಳತನ ವಿರುದ್ಧ ಸಂಘಟಿತ
    ಹೋರಾಟ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್‌‌ ಸುರ್ಜೇವಾಲ ಕರೆ ನೀಡಿದ್ದಾರೆ
    ಮತಗಳ್ಳತನ ವಿರುದ್ದ ಬೆಂಗಳೂರಿನ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಹಿಸಂಗ್ರಹ ಅಭಿಯಾನಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
    “ನಮ್ಮ ಸಂವಿಧಾ‌ನದಲ್ಲಿ ಒಬ್ಬ ವ್ಯಕ್ತಿ ಒಂದು ಮತ ಎಂದು ಹೇಳಲಾಗಿದೆ. ಇಂದು ಸಂವಿಧಾನ ಹೇಳಿದ್ದನ್ನು ಮೀರಿ ಮತಕಳ್ಳತನ ಮಾಡಲಾಗುತ್ತಿದೆ. ನಮ್ಮ ಪವಿತ್ರ ಸಂವಿದಾನವನ್ನು ಎಲ್ಲರೂ ಒಟ್ಟಿಗೆ ಸೇರಿ ರಕ್ಷಿಸಿಕೊಳ್ಳಬೇಕಿದೆ ಎಂದು ಹೇಳಿದರು
    ಈ ದೇಶದಲ್ಲಿ ಹೊಸಕ್ರಾಂತಿಯ ಅಲೆಯನ್ನು, ಬದಲಾವಣೆಯನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ.‌‌ ಕಾಂಗ್ರೆಸ್ ‌ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿ ಗಲ್ಲಿ, ಗಲ್ಲಿಯಲ್ಲಿ ಎಷ್ಟು ‌ಜನ ಸಾಧ್ಯವೋ‌‌ ಅಷ್ಟು ‌ಜನರನ್ನು ಒಗ್ಗೂಡಿಸಿ ಮತ‌ಕಳ್ಳತನದ ವಿರುದ್ಧ ಜನಾಭಿಪ್ರಾಯ ರೂಪಿಸಬೇಕು.‌ ಜನರ ಹಕ್ಕನ್ನು ಕಾಪಾಡುವಂತೆ ಪ್ರೇರೆಪಿಸಬೇಕು. ಬೆಂಗಳೂರಿನ ಪುಲಕೇಶಿ ನಗರದಲ್ಲಿ ‌ಎದ್ದಿರುವ ದನಿ ಇಡೀ ದೇಶಕ್ಕೆ ಕೇಳಿಸಬೇಕು ಎಂದರು.
    ಅಶ್ಪಾಕ್‌ ಉಲ್ಲಾ ಖಾನ್, ಭಗತ್ ಸಿಂಗ್, ಸುಖದೇವ, ರಾಜಗುರು, ಸುಭಾಷ್ ‌ಚಂದ್ರ ಬೋಸ್,‌‌ ಬಾಲ ಗಂಗಾಧರ ‌ತಿಲಕರು ಹೀಗೆ ನೂರಾರು ಮಂದಿ ಈ ದೇಶದಲ್ಲಿ ಕ್ರಾಂತಿಯ ಕಿಡಿ ಹೊತ್ತಿಸಿದ್ದಾರೆ. ಆದ ಕಾರಣಕ್ಕೆ ನಾವು‌ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಇದನ್ನ ಮತಕಳ್ಳತನದ ಮೂಲಕ ವ್ಯವಸ್ಥಿತವಾಗಿ ಕದಿಯಲಾಗುತ್ತಿದೆ ಎಂದು ದೂರಿದರು
    ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ‌ಅವರ ಕೊಡುಗೆಯಾದ ಸಂವಿಧಾನವನ್ನ ರಕ್ಷಣೆ ಮಾಡಲು ಸೇರಿದ್ದೇವೆ.‌ ಇಂದು ಸಂವಿಧಾನದ ಜೊತೆ ಜೊತೆಗೆ ಪ್ರಜಾಪ್ರಭುತ್ವವನ್ನು ನಾಶ ಮಾಡಲಾಗುತ್ತಿದೆ. ಇದು ಕೇವಲ ಕಾಂಗ್ರೆಸ್ ಮತ್ತು ಬಿಜಪಿ ನಡುವಿನ ಸಂಘರ್ಷವಲ್ಲ. ಈ ದೇಶದ ಜನ ಸಾಮಾನ್ಯರ ಸಂಘರ್ಷ ಎಂದು ಹೇಳಿದರು
    ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮತ ಕಳ್ಳತನ ವಿರೋಧಿ ಹೋರಾಟ ಕೇವಲ ರಾಜಕೀಯ ಉದ್ದೇಶದ ಹೋರಾಟವಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟ. ಜನರ ಮತಾಧಿಕಾರದ ರಕ್ಷಣೆಯ ಹೋರಾಟ ಎಂದು ತಿಳಿಸಿದರು
    ಈ ದೇಶದ ಜನರು ತಮ್ಮ ಆಯ್ಕೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನೇ ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬರ ಮತಗಳನ್ನೂ ವ್ಯವಸ್ಥಿತವಾಗಿ ಕದಿಯಲಾಗುತ್ತಿದೆ. ಒಬ್ಬ ವ್ಯಕ್ತಿಯ ಮತ ಎರಡಾಗಿ ಬದಲಾಗುತ್ತಿದೆ. ಒಂದೊಂದು ಮನೆಯಲ್ಲಿ ಐವತ್ತಕ್ಕೂ ಹೆಚ್ಚು ಜನ ಮತದಾರರು ವಾಸವಿದ್ದಾರೆ.‌ ಇಷ್ಟೊಂದು ‌ಅಕ್ರಮದ ಹಿಂದೆ ಇರುವವರು ಬಿಜೆಪಿ ಪಕ್ಷದ ಜೊತೆ ನಿಂತಿದ್ದಾರೆ. ಈ ಅಕ್ರಮವನ್ನು ನಾವು ಪ್ರಶ್ನೆ ಮಾಡಬೇಕು. ಬಯಲಿಗೆ ಎಳೆಯಬೇಕು. ಅದಕ್ಕಾಗಿ ಬೃಹತ್ ಹೋರಾಟದ ಜೊತೆ ಜೊತೆಯಲ್ಲಿ ಸಣ್ಣ ಸಣ್ಣ ಪ್ರಮಾಣದ ಜನಜಾಗೃತಿ ಹೋರಾಟಕ್ಕೆ‌‌ ಕಾಂಗ್ರೆಸ್ ‌ಸಜ್ಜಾಗಿದೆ ಎಂದು ವಿವರಿಸಿದರು
    ಮತ ಕಳ್ಳತನದಿಂದ ಈ ದೇಶದ ಮಹಿಳೆಯರು, ಕೂಲಿ ಕಾರ್ಮಿಕರು, ಬಡವರು, ಹಿಂದುಳಿದವರು, ಅಲ್ಪ ಸಂಖ್ಯಾತರಿಗೆ, ಪರಿಶಿಷ್ಟ ಜಾತಿ,‌ ಪಂಗಡದವರಿಗೆ, ಸಣ್ಣ ಉದ್ದಿಮೆದಾರರು, ದಿನಸಿ ಅಂಗಡಿ ಮಾಲೀಕರು, ಸಣ್ಣಪುಟ್ಟ ಬೀದಿಬದಿ ವ್ಯಾಪಾರಿಗಳು ಹೀಗೆ ಸಮಾಜದ ಸೂಕ್ಷ್ಮ ವರ್ಗದವರ ಮೇಲಿನ ದಾಳಿ ಹಾಗೂ ಈ ಎಲ್ಲಾ ಸಮಾಜಗಳಿಗೆ ತೀವ್ರ ಹಿನ್ನಡೆ ಎನ್ನಬಹುದು. ‌ಇದು ಕೇವಲ ಮತಕಳ್ಳತನ ಮಾತ್ರವಲ್ಲ. ಜನಸಾಮಾನ್ಯರ ಹಕ್ಕಿನ ಕಳ್ಳತನ‌ ಎಂದರು.
    ಪ್ರಜಾಪ್ರಭುತ್ವದ ಕಳ್ಳತನ ಮಾಡಲು ನಾವು ಬಿಡುವುದಿಲ್ಲ ಎಂದು ಸುಮಾರು ಐದು ಕೋಟಿಗೂ ಹೆಚ್ಚು ಸಹಿಗಳನ್ನು ಸಂಗ್ರಹಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಬೇಕಿದೆ. ಮಹದೇವಪುರ ಹಾಗೂ ಆಳಂದ ಕ್ಷೇತ್ರದಲ್ಲಿ ಮತ‌ಕಳ್ಳತನ ನಡೆದಂತೆ ದೇಶದ ಪ್ರತಿಯೊಂದು ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು
    ಮಾಧ್ಯಮಗಳನ್ನು, ಸರ್ಕಾರಿ ನೌಕರರನ್ನು, ಜನಪ್ರತಿನಿಧಿಗಳನ್ನು, ಪ್ರತಿಯೊಬ್ಬರನ್ನು ರಕ್ಷಿಸುತ್ತಿರುವುದು ಈ ದೇಶದ ಸಂವಿಧಾನ. ‌ನೆಹರು, ವಲ್ಲಭಭಾಯಿ ಪಟೇಲ್, ಬಾಬು ರಾಜೇಂದ್ರ ‌ಪ್ರಸಾದ್, ಮೌಲಾನಾ ಅಬ್ದುಲ್ ಕಲಾಂ ಸೇರಿದಂತೆ ಮಹಾನ್ ವ್ಯಕ್ತಿಗಳ ತ್ಯಾಗ, ಬಲಿದಾನದಿಂದ ಈ ದೇಶ ನಿರ್ಮಾಣವಾಗಿದೆ. ಇಂತಹ ಪವಿತ್ರ ದೇಶವನ್ನ ಲೂಟಿಕೋರರಿಂದ‌ ರಕ್ಷಿಸಲು ಪಣ ತೊಡಬೇಕು ಎಂದು ಕರೆ ನೀಡಿದರು
    ಪಕ್ಷದ ಎಲ್ಲಾ ಘಟಕಗಳು ಕ್ರಿಯಾಶೀಲವಾಗಿದ್ದು ಮತಕಳ್ಳತನದ ವಿರುದ್ದ ಜನಾಭಿಪ್ರಾಯ ರೂಪಿಸಬೇಕು. ಕಾಂಗ್ರೆಸ್ ‌ಪಕ್ಷದ ದನಿಯಾಗದೇ ದೇಶದ ದೇಶದ ಜನಸಾಮಾನ್ಯರ ದನಿಯಾಗಿ ಇದು ರೂಪುಗೊಳ್ಳಬೇಕು ಎಂದು ಮನವಿ ಮಾಡಿದರು.

    Bangalore Congress Government Karnataka News Politics Trending Varthachakra ಕಳ್ಳತನ ಕಾಂಗ್ರೆಸ್ ಕಾನೂನು Election ನ್ಯಾಯ ಬಿಜೆಪಿ Bengaluru ರಾಜಕೀಯ ರಾಹುಲ್ ಗಾಂಧಿ Business ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಾಡಬಾರದ ಕೆಲಸ ಮಾಡಿದ ಗಂಡ.
    Next Article ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dragon money casino играть on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • pansionatmskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • citymebell.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಶಿಕ್ಷಕರಿಗೆ ಮತ್ತೊಂದು ಶಾಕ್! #varthachakra #education #teachers #government #karnataka #shockingfacts
    Subscribe