ಬೆಂಗಳೂರು,ಮೇ.13:
ಲೋಕಸಭೆ Electionಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮೊದಲು ತಮ್ಮ ಸರ್ಕಾರ ಉಳಿಸಿಕೊಳ್ಳಲಿ ಎಂದು ಹೇಳಿರುವ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್,ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಸರ್ಕಾರ ಪತನವಾಗಲಿದೆ ಎನ್ನುವ ಶಿಂಧೆ ಅವರು,ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಪ್ರತಿಕ್ರಿಯಿಸಿದರು.
ಲೋಕಸಭಾ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪತನಾಗುವುದು ಎಂಬುದು ಭ್ರಮೆ.ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ಅವರು ವಿವರಿಸಿದರು.
ಏಕನಾಥ ಶಿಂದೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದರು.
5 Comments
гадание на индийских картах гадание на индийских картах .
срочный вывод из запоя на дому ростов http://www.vyvod-iz-zapoya-rostov111.ru .
вывод из запоя санкт-петербург вывод из запоя санкт-петербург .
снять ломку наркомана снять ломку наркомана .
интернет магазин саженцы почтой rodnoisad.ru .