ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಿದ್ದು,ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು ಕುತೂಹಲಕರ ಘಟ್ಟ ತಲುಪಿವೆ.
ಮುಂಬರುವ ವಿಧಾನಸಭೆ ಚುನಾವಣೆಗೆಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಅಮಿತ್ ಶಾ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.ನೆನೆಗುದಿಗೆ ಬಿದ್ದಿರುವ ಸಂಪುಟ ಪುನಾರಚನೆಯಷ್ಟೇ ಅಲ್ಲ ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದ್ದು ಎಲ್ಲಾ ವಿಷಯಗಳ ಬಗ್ಗೆ ಅಮಿತ್ ಶಾ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.
ಪಂಚತಾರಾ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಅವರು ಅಲ್ಲಿಯೇ ರಾಜ್ಯ ಕೋರ್ ಕಮಿಟಿಯ 16 ಸದಸ್ಯರು, 30 ಪದಾಧಿಕಾರಿಗಳು, ನಾಲ್ವರು ವಿಭಾಗವಾರು ಪ್ರತಿನಿಧಿಗಳು ಸೇರಿ 50 ಮಂದಿ ಪ್ರಮುಖರ ಜತೆ ಸಭೆ ನಡೆಸಲಿದ್ದಾರೆ. ಭವಿಷ್ಯದ ಚುನಾವಣೆಗೆ ಕಾರ್ಯತಂತ್ರ ರೂಪಿಸಲಿರುವ ಅಮಿತ್ ಶಾ, ಸಂಘಟನೆ ಯಾವ ರೀತಿ ಮಾಡಬೇಕು, ಸರ್ಕಾರ ಮತ್ತು ಪಕ್ಷ ಹೇಗೆ ಸಾಗಬೇಕು, ವಿವಾದಗಳಿಂದ ದೂರವಿದ್ದು, ಆಡಳಿತ ನಡೆಸುವ ಬಗೆ ಸೇರಿದಂತೆ ಹತ್ತು ಹಲವು ವಿಚಾರಗಳ ಕುರಿತು ಸಲಹೆ ಸೂಚನೆ ನೀಡಲಿದ್ದಾರೆ.
ಈ ಬೆಳವಣಿಗೆಗಳ ಬೆನ್ನಲ್ಲೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ಕುರಿತು ರಾಷ್ಟ್ರೀಯ ನಾಯಕರು ಚರ್ಚಿಸುತ್ತಿದ್ದಾರೆ ಮೇ 10ರಂದು ಸಿಎಂ ಬದಲಾವಣೆ ಆಗಬಹುದು ಎಂದು ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಅಂತಿಮವಾಗಿ ಪ್ರಧಾನಿ ತೀರ್ಮಾನ ಮಾಡುತ್ತಾರೆ ಎಂದರು.
ಕರ್ನಾಟಕ ಹಾಗು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯ ನಿರ್ಣಯ ಆಗುತ್ತದೆ ಎಂದು ಹೇಳಿದರು.
Previous Articleರಿಂಕು-ರಾಣಾ ಅಬ್ಬರ: ರಾಜಸ್ಥಾನಕ್ಕೆ ನೀರು ಕುಡಿಸಿದ ಕೋಲ್ಕತ್ತಾ
Next Article ಹೊರಟ್ಟಿ ಬಿಜೆಪಿ ಸೇರ್ಪಡೆ: ಸಭಾಪತಿ ಹುದ್ದೆಗೆ ಗುಡ್ ಬೈ