ಬೆಂಗಳೂರು.ಸೆ,2:
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಇದೀಗ ಕುತೂಹಲಕಾರಿಯಾದ ತಿರುವು ಪಡೆದುಕೊಂಡಿದೆ. ನ್ಯಾಯಾಲಯದ ತಡೆಯಾಜ್ಞೆ ಮೂಲಕ ಸದ್ಯಕ್ಕೆ ಕಾನೂನು ಕುಣಿಕೆಯಿಂದ ಬಚಾವಾಗಿರುವ ಅವರಿಗೆ ಮತ್ತೊಂದು ಕಂಟಕ ಎದುರಾಗುವ ಲಕ್ಷಣಗಳು ಗೋಚರಿಸಿವೆ
ಸಂತ್ರಸ್ತೆಯ ತಾಯಿ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ 2024ರ ಮಾರ್ಚ್ 15ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ 354 (ಎ)ರಡಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದಾದ ಬಳಿಕ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಬಾಲಕಿಯ ತಾಯಿ ಮಾರ್ಚ್ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.
ಉಸಿರಾಟದ ತೊಂದರೆಗೆ ಒಳಗಾಗಿ ಹುಳಿಮಾವು ಬಳಿಯ ನ್ಯಾನೋ ಖಾಸಗಿ ಆಸ್ಪತ್ರೆಗೆ ಮಾರ್ಚ್ 26ರ ರಾತ್ರಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆಕೆಗೆ ಕೂಡಲೇ ವೈದ್ಯರು ತಪಾಸಣೆ ನಡೆಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.
ಈ ಸಂಬಂಧ ಹೆಣ್ಣೂರು ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಆಯೋಗದ ಅಧ್ಯಕ್ಷೆ ಪೊಲೀಸರಿಗೆ ಸೂಚಿಸಿದ್ದಾರೆ.
Previous Articleಪ್ರಿಯಾಂಕ ಖರ್ಗೆ ಎಂ ಬಿ ಪಾಟೀಲ್ ಗೆ ಭೂ ಕಂಟಕ.
Next Article ಹೋಂಸ್ಟೇ ತೆರವು ಮಾಡಿ.