ಮುಂಬೈ: ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಟೇಕಾಫ್ ಆದ ಕರಲ ಸಮಯದಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ A320neo ವಿಮಾನದ ಎಂಜಿನ್ನ ದೋಷದಿಂದ ಆಗಸದಲ್ಲೇ ವಿಮಾನ ಸ್ಥಗಿತಗೊಂಡು ಕೆಲ ನಿಮಿಷದಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಗುರುವಾರ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬೇರೆ ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಈ ಘಟನೆ ಬಗ್ಗೆ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.