ಬೆಂಗಳೂರು,ಆ.14- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ಯುವಕನೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೆಜೆಸ್ಟಿಕ್ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದರಿಂದ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.
ಸುಮಾರು ಹದಿನೈದು ಮಂದಿ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಬೆಂಬಲಿಗ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಎಚ್ಚರಿಸಿದೆ.
ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಲ್ಲೆ ನಡೆಸಿದವರನ್ನು ಪೊಲೀಸರು ಶೋಧಿಸುತ್ತಿದ್ದಾರೆ. ವಿಡಿಯೋವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.
Previous Articleಭೋವಿ ನಿಗಮದ ಅಕ್ರಮದಲ್ಲಿ ಯಾರಿಗೆ ಪಾಲು.
Next Article ಬೆಂಗಳೂರಿನಲ್ಲಿ ಮತ್ತೆ Work from home.


2 Comments
Den ultimate casino-opplevelsen venter på Betano. Nye brukere får opptil €500 velkomstbonus pluss free spins. Sett deg ved live https://betanogame.org/no/bonuses/ blackjack-bord eller spill på sport med uslåelige odds. Din store gevinst starter her.
Mostbet: diversГЈo garantida + bГґnus gigante esperando por vocГЄ – 30 Segundos , Mostbet: onde cada clique pode levar vocГЄ a momentos Г©picos .