ಬೆಂಗಳೂರು,ಜು.12- ಮುಂಬರುವ ಲೋಕಸಭಾ Electionಯಲ್ಲಿ ಬಿಜೆಪಿ ವಿರುದ್ಧ ಸಮರ್ಥ ಹೋರಾಟ ನಡೆಸಲು ಕಾಂಗ್ರೆಸ್ ನೇತೃತ್ವದಲ್ಲಿ ಸಮಾನ ಮನಸ್ಕ ಪಕ್ಷಗಳ ಒಕ್ಕೂಟ ರಚನೆ ಪ್ರಕ್ರಿಯೆ ತೀವ್ರಗೊಂಡಿದೆ.
ಈ ಕುರಿತಂತೆ ಈಗಾಗಲೇ ಒಂದು ಸಭೆ ನಡೆದಿದ್ದು ಇದೀಗ ಮತ್ತೆ ಇದೇ 18 ರಂದು ಬೆಂಗಳೂರಿನಲ್ಲಿ ಎರಡನೇ ಸಭೆ ಆಯೋಜಿಸಲಾಗಿದೆ.ಇದರಲ್ಲಿ ಕಾಂಗ್ರೆಸ್ ಅಧಿ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಭಾಗವಹಿಸಲಿದ್ದಾರೆ. ಆಮ್ ಆದ್ಮಿ ಸೇರಿದಂತೆ ಒಟ್ಟು 24 ಪಕ್ಷಗಳನ್ನು ಈ ಸಭೆಗೆ ಆಹ್ವಾನಿಸಲಾಗಿದೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ
ಮೂಲಗಳು ತಿಳಿಸಿವೆ.
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟವನ್ನು ನಡೆಸುವ ಪ್ರಯತ್ನಗಳ ಭಾಗವಾಗಿ ಕಾಂಗ್ರೆಸ್ ಕರೆದಿರುವ ಸಭೆಗೆ ಆಗಮಿಸುತ್ತಿರುವ ಎಲ್ಲಾ ನಾಯಕರಿಗೆ ಒಂದು ದಿನ ಮೊದಲು ಸೋನಿಯಾ ಗಾಂಧಿ ಅವರು ಔತಣಕೂಟವನ್ನು ಆಯೋಜಿಸಲು ಚಿಂತನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ
ಸುಮಾರು 15 ಪಕ್ಷಗಳನ್ನು ಒಳಗೊಂಡ ಮೊದಲ ಪ್ರತಿಪಕ್ಷ ಸಭೆಯು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬಿಹಾರದಲ್ಲಿ ನಡೆದಿತ್ತು.ಈ ಬಾರಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಇದರಲ್ಲಿ ಹೊಸದಾಗಿ ಎಂಟು ಪಕ್ಷಗಳು ಸೇರುವ ಸಾಧ್ಯತೆಯಿದೆ ಎಂದು ಗೊತ್ತಾಗಿದೆ.
2014 ರ ಚುನಾವಣೆಯಲ್ಲಿ ತಮಿಳು ನಾಡಿನಲ್ಲಿ ಕೆಡಿಎಂಕೆ ಮತ್ತು ಎಂಡಿಎಂಕೆ ಬಿಜೆಪಿಯ ಮಿತ್ರಪಕ್ಷಗಳಾಗಿದ್ದವು, ಆದರೆ, ಈ ಬಾರಿ ಆವು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಸೇರಲಿವೆ.
ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷಗಳ ಉನ್ನತ ನಾಯಕರಿಗೆ ಆಹ್ವಾನಗಳನ್ನು ಕಳುಹಿಸಿದ್ದಾರೆ ಮತ್ತು ಅದರಲ್ಲಿ ಪಾಟ್ನಾದಲ್ಲಿ ನಡದ ಮೊದಲ ಸಭೆಯನ್ನು ಉಲ್ಲೇ ಖಿಸಿದ್ದಾರೆ.
ನಮ್ಮ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಹಲವಾರು ವಿದ್ಯಮಾನಗಳು ನಡೆದಿವೆ.ಇವುಗಳ ಜೊತೆಗೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಸರ್ವಾನುಮತದ ಒಪ್ಪಂದಕ್ಕೆ ಬಂದಿದ್ದರಿಂದ ಸಭೆಯು ಉತ್ತಮ ಯಶಸ್ಸನ್ನು ಕಂಡಿತು ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ