ಬೆಂಗಳೂರು.
ರಾಜ್ಯ ಬಿಜೆಪಿಯನ್ನು ಯಾವುದೇ ಕಾರಣಕ್ಕೂ ಒಂದು ಕುಟುಂಬದ ಆಸ್ತಿಯನ್ನಾಗಲು ಬಿಡುವುದಿಲ್ಲ ಪಕ್ಷದ ತತ್ವ ಸಿದ್ಧಾಂತಗಳ ಜೊತೆ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಶಿಸ್ತು ಉಲ್ಲಂಘನೆ ಆರೋಪದಲ್ಲಿ ಪಕ್ಷದ ರಾಷ್ಟ್ರೀಯ ಘಟಕದ ಶಿಸ್ತು ಸಮಿತಿ ನೀಡಿರುವ
ನೋಟೀಸ್ ಗೆ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ ಯತ್ನಾಳ್ ಒಂದು ಕುಟುಂಬದ ವಿರುದ್ಧ ತಾವು ಆರಂಭಿಸಿರುವ ಹೋರಾಟದಿಂದ ಸರಿಯುವ ಪ್ರಶ್ನೆ ಇಲ್ಲ ಬಿಜೆಪಿ ಯಾವುದೇ ಕಾರಣಕ್ಕೂ ಕುಟುಂಬದ ಆಸ್ತಿಯಾಗಬಾರದು ಎಂದು ಹೇಳಿದ್ದಾರೆ.
ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ನಾನು ಉತ್ತರಿಸುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ತೆರದಿಡುವೆ. ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಹಾಗೂ ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ
ತಾವು ದೆಹಲಿಯಲ್ಲಿದ್ದು ವರಿಷ್ಠರನ್ನು ಭೇಟಿಯಾಗುತ್ತಿದ್ದೇನೆ ಈ ವೇಳೆ ರಾಜ್ಯದಲ್ಲಿ ನಡೆದಿರುವ ಹೊಂದಾಣಿಕೆಯ ರಾಜಕಾರಣ ಒಂದು ಕುಟುಂಬ ನಡೆಸುತ್ತಿರುವ ಭ್ರಷ್ಟಾಚಾರ ಪಕ್ಷದ ಹಾದಿ ತಪ್ಪಿರುವ ಹೋರಾಟ ಸೇರಿದಂತೆ ಎಲ್ಲ ಅಂಶಗಳನ್ನು ಅವರಿಗೆ ವಿವರಿಸುತ್ತೇನೆ ಎಂದು ತಿಳಿಸಿದ್ದಾರೆ.