ಬೆಂಗಳೂರು, ಸೆ.24-
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳು ಪ್ರಮುಖ ಪಟ್ಟಣಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಬೆಂಗಳೂರು ಮತ್ತು ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸ,ಕಚೇರಿ ಬಳಿ ಎರಡು ಕೆಎಸ್‌ಆರ್‌ಪಿ ತುಕಡಿಯ ಜೊತೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು, ಮೈಸೂರುನಗರ ಸೇರಿದಂತೆ ಎಲ್ಲಾ ನಗರಗಳ ಆಯುಕ್ತರುಗಳು, ಜಿಲ್ಲೆಗಳ ಎಸ್‌ಪಿ ಹಾಗೂ ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಸಲು ರಾಜ್ಯ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ
ಮುಖ್ಯಮಂತ್ರಿಗಳ ವಿರುದ್ಧ ತೀರ್ಪು ಬಂದಿರುವುದರಿಂದ, ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಬಂದೋಬಸ್ತ್‌ನಲ್ಲಿರುವಂತೆ ಡಿಜಿಪಿ ಅವರು ತಿಳಿಸಿದ್ದಾರೆ.