Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಪರ ಕೆಲಸ ಮಾಡಿ-ಸಂಸದರಿಗೆ ಸಿಎಂ ಮೊರೆ..
    Trending

    ರಾಜ್ಯದ ಪರ ಕೆಲಸ ಮಾಡಿ-ಸಂಸದರಿಗೆ ಸಿಎಂ ಮೊರೆ..

    vartha chakraBy vartha chakraJune 29, 202424 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28-
    ಕಿತ್ತೂರು ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಹದಾಯಿ ಯೋಜನೆ ಜಾರಿಗೆ ಇರುವ ಅಡೆತಡೆಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲು ಅನುಮತಿ ದೊರಕಿಸಿಕೊಡಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಕೇಂದ್ರ ಸಚಿವರು ಮತ್ತು ನೂತನ ಸಂಸದ ರಿಗೆ ಮನವಿ ಮಾಡಿದ್ದಾರೆ.
    ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯದ ಹಲವು ಯೋಜನೆಗಳಿಗೆ ಕೇಂದ್ರದ ನೆರವು ದೊರಕಿಸಿ ಕೊಡುವ ನಿಟ್ಟಿನಲ್ಲಿ ಮಾಡಬೇಕಾಗಿರುವ ಕೆಲಸಗಳ ಕುರಿತಂತೆ ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಅವರು ಈ ಕುರಿತಾದ ಬೇಡಿಕೆಗಳ ಪಟ್ಟಿಯನ್ನು ಅವರಿಗೆ ಹಸ್ತಾಂತರಿಸಿದರು.
    ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಮಹದಾಯಿ ಕುಡಿಯುವ ನೀರಿನ ಯೋಜನೆ 2018ರಲ್ಲಿ ಇತ್ಯರ್ಥವಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಇದೆ ನಿನ್ನೆ ಸಭೆಗೂ ಮುನ್ನಾ ಕೇಂದ್ರ ಸಚಿವರು ನೀಡಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಅದು ತಪ್ಪು ಮಾಹಿತಿ ಎಂದು ಹೇಳಿದರು
    ವಿವಾದ ಕುರಿತು ನ್ಯಾಯಾಧೀಕರಣದ ತೀರ್ಪು ನೀಡಿದೆ, ಅದು ಅಧಿಸೂಚನೆಯೂ ಆಗಿದೆ. ಅದರ ಆಧಾರದ ಮೇಲೆ ನಾವು ಮಹದಾಯಿ ಯೋಜನೆಗೆ ವಿಸ್ತ್ರ ಯೋಜನಾ ವರದಿ ಸಿದ್ದಪಡಿಸಿ, ಟೆಂಡರ್‌ ಕರೆದಿದ್ದೇವೆ.ಅದಕ್ಕೆ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಮಾತ್ರ ಬಾಕಿ ಇದೆ. ಅದಕ್ಕೆ ನ್ಯಾಯಾಲಯದಲ್ಲಿ ಪ್ರಕರಣ ಇದೆ ಎಂದು ನೆಪ ಹೇಳಬೇಡಿ ಕೇಂದ್ರದಿಂದ ಅನುಮತಿ ಕೊಡಿಸಿ ಎಂದು ಕೇಂದ್ರ ಸಚಿವರು ಹಾಗೂ ಸಂಸದರದಲ್ಲಿ ಮನವಿ ಮಾಡಿದ್ದೇವೆ ಎಂದರು.
    ಭದ್ರಾ ಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದು,5300 ಕೋಟಿ ನೀಡುವುದಾಗಿ 2023-24ರ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದರು. ಹಣ ಬಿಡುಗಡೆಯಾಗಿಲ್ಲ. ರಾಜ್ಯದಿಂದ ತಾಂತ್ರಿಕ ಸಮಸ್ಯೆ ಇದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆ ರೀತಿ ಸಮಸ್ಯೆ ಇದೆ ಎಂದು ಈವರೆಗೂ ನಮಗೆ ಹೇಳಿರಲಿಲ್ಲ ಎಂದು ತಿಳಿಸಿದರು.
    ಅಸಲಿಗೆ ಯಾವುದೇ ಸಮಸ್ಯೆಯೂ ಇಲ್ಲ. ಹಣ ಬಿಡುಗಡೆ ಮಾಡುವಂತೆ ನಾವು ಪತ್ರ ಬರೆದಿದ್ದೇವೆ. ಹಣ ಸಿಗಲಿದೆ ಎಂಬ ಆಶಾಭಾವನೆ ಇದೆ. ಅದೇ ರೀತಿಕೃಷ್ಣ ನ್ಯಾಯಾಧೀಕರಣ ತೀರ್ಪಿನ ಅಧಿಸೂಚನೆಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಲು ಆಗ್ರಹಿಸಿದ್ದೇವೆ ಎಂದು ಹೇಳಿದರು
    ಕಾವೇರಿ ನದಿ ನೀರಿನ ವಿವಾದ ಈಗಾಗಲೇ ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಿದೆ. ತೀರ್ಪಿನಂತೆ ತಮಿಳುನಾಡಿಗೆ ಸಾಮಾನ್ಯ ವರ್ಷದಲ್ಲಿ 179 ಟಿಎಂಸಿ ನೀರು ಹರಿಸಲು ಕರ್ನಾಟಕ ಒಪ್ಪಿಕೊಂಡಿದೆ.
    ಹೆಚ್ಚುವರಿ ನೀರಿನ ಸಂಗ್ರಹಕ್ಕೆ ನಮ ನೆಲದಲ್ಲಿ ನಮ ಹಣದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಯೋಜನೆ ರೂಪಿಸಿದ್ದೇವೆ. ತಮಿಳುನಾಡು ರಾಜಕೀಯ ಕಾರಣಕ್ಕೆ ತಕರಾರು ತೆಗೆದು ಸುಪ್ರೀಕೋರ್ಟ್‌ ಮೊರೆ ಹೋಗಿದೆ. ಆದರೂ ಯಾವ ನ್ಯಾಯಾಲಯದಲ್ಲೂ ತಡೆಯಾಜ್ಞೆ ಇಲ್ಲ. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕಿದೆ ಎಂದು ವಿವರಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    Next Article ಗಡ್ಕರಿ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ ವಿಷಯ ಗೊತ್ತಾ..
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qefkeaj on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Daviddek on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Michaelplony on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.